ಬುಧವಾರ, ಅಕ್ಟೋಬರ್ 21, 2020
22 °C

ಇದೇ 26ರಂದು ಶ್ರೀಲಂಕಾ ಪ್ರಧಾನಿ ಜೊತೆ ಮೋದಿ ದ್ವಿಪಕ್ಷೀಯ ಸಭೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರು ಇದೇ 26 ರಂದು ವಿಡಿಯೊ ಕಾನ್ಫರೆನ್ಸ್‌ ಮೂಲಕ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬುಧವಾರ ತಿಳಿಸಿದೆ.

ಈ ವೇಳೆ ಉಭಯ ನಾಯಕರು ರಾಷ್ಟ್ರಗಳ ನಡುವಿನ ಸಂಬಂಧ ವೃದ್ಧಿ ಬಗ್ಗೆ ಮಾತುಕತೆ ನಡೆಸಲಿದ್ದು, ಭಯೋತ್ಪಾದನೆ ಶಮನ, ರಕ್ಷಣಾ ವ್ಯವಸ್ಥೆ, ವ್ಯಾಪಾರ ವೃದ್ಧಿ ಹಾಗೂ  ಶ್ರೀಲಂಕಾದಲ್ಲಿ ಭಾರತೀಯ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಇದೇ ಸಂದರ್ಭದಲ್ಲಿ ಶ್ರೀಲಂಕಾದ ತಮಿಳು ಸಮುದಾಯದ ಆಕಾಂಕ್ಷೆಗಳನ್ನು ಈಡೇರಿಸುವ ಬಗ್ಗೆಯೂ ಭಾರತ ಮಾತುಕತೆ ನಡೆಸಲಿದೆ ಎಂದು ಸಚಿವಾಲಯ ತಿಳಿಸಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು