ಮಂಗಳವಾರ, ಜನವರಿ 25, 2022
25 °C

ನಿಮ್ಮ ನಡವಳಿಕೆಯಲ್ಲಿ ಬದಲಾವಣೆ ತಂದುಕೊಳ್ಳಿ: ಬಿಜೆಪಿ ಸಂಸದರ ವಿರುದ್ಧ ಮೋದಿ ಗರಂ

ಐಎಎನ್‌ಎಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ‘ನಿಮ್ಮ ನಡವಳಿಕೆಯಲ್ಲಿ ಬದಲಾವಣೆ ತಂದುಕೊಳ್ಳಿ. ಇಲ್ಲವಾದಲ್ಲಿ ಬದಲಾವಣೆ ತಾನಾಗೇ ಆಗುತ್ತದೆ’ ಎಂದು ಬಿಜೆಪಿ ಸಂಸದರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಗರಂ ಆಗಿದ್ದಾರೆ.

ಮಂಗಳವಾರ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ‘ನಮ್ಮ ಸಂಸದರು ಎಲ್ಲಾ ಸಂಸತ್‌ ಅಧಿವೇಶನಗಳಲ್ಲಿ ಸಕ್ರಿಯರಾಗಿ ಭಾಗವಹಿಸಬೇಕು. ಸದನದ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕು’ ಎಂದು ಎಚ್ಚರಿಕೆ ನೀಡಿದ್ದಾರೆ. 

ಅಧಿವೇಶನ ನಡೆಯುವ ಸಂದರ್ಭದಲ್ಲಿ ಎಲ್ಲಾ ಸದಸ್ಯರು ಸದನದಲ್ಲಿ ಹಾಜರಿರುವುದು ಕಡ್ಡಾಯ. ಈ ವಿಚಾರದಲ್ಲಿ ಸಣ್ಣ ಮಕ್ಕಳ ರೀತಿ ಪದೇ ಪದೇ ಹೇಳಿಸಿಕೊಳ್ಳುವುದು ಸರಿಯಲ್ಲ’  ಎಂದು ಮೋದಿ ಎಚ್ಚರಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಮ್ಮ ಕ್ಷೇತ್ರಗಳಲ್ಲಿ ಮಕ್ಕಳಿಗಾಗಿ ಕ್ರೀಡೆ, ಫಿಟ್‌ನೆಸ್‌ ಸ್ಪರ್ಧೆಗಳನ್ನು ಆಯೋಜಿಸುವಂತೆ ಸಂಸದರಿಗೆ ಮೋದಿ ಕರೆ ನೀಡಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ  ಹೇಳಿದರು.

ಆಯಾ ಪ್ರದೇಶಗಳಲ್ಲಿ ನೆಲೆಸಿರುವ ಪದ್ಮ ಪ್ರಶಸ್ತಿ ಪುರಸ್ಕೃತರೊಂದಿಗೆ ಸಂಪರ್ಕದಲ್ಲಿರಬೇಕು. ಅವರೊಂದಿಗೆ ಆಗಾಗ್ಗೆ ಸಂವಾದ ನಡೆಸುವಂತೆ ಸಂಸದರಿಗೆ ಮೋದಿ ನಿರ್ದೇಶನ ನೀಡಿದ್ದಾರೆ ಎಂದು ಜೋಶಿ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು