ಶುಕ್ರವಾರ, ಮೇ 14, 2021
31 °C

ನಾಸಿಕ್‌ ಆಮ್ಲಜನಕ ಸೋರಿಕೆ: 3 ವಾರ ಹಿಂದೆಯಷ್ಟೇ ಕಾರ್ಯಾರಂಭ ಮಾಡಿದ್ದ ಘಟಕ!

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಆಮ್ಲಜನಕ ಪೂರೈಕೆಯ ವ್ಯತ್ಯದಿಂದಾಗಿ 22 ಕೋವಿಡ್‌ ರೋಗಿಗಳ ಸಾವಿಗೆ ಕಾರಣವಾದ ನಾಸಿಕ್‌ನ ಆಸ್ಪತ್ರೆಯಲ್ಲಿದ್ದ ವೈದ್ಯಕೀಯ ಆಮ್ಲಜನಕ ಸಂಗ್ರಹ ಘಟಕ 21 ದಿನಗಳ ಹಿಂದೆಯಷ್ಟೇ ಕಾರ್ಯಾರಂಭ ಮಾಡಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿದ್ದ 13 ಸಾವಿರ ಲೀಟರ್‌ ಸಂಗ್ರಹ ಸಾಮರ್ಥ್ಯದ ಆಮ್ಲಜನಕದ ಘಟಕ, ಮಾರ್ಚ್‌ 31ರಿಂದ ಕಾರ್ಯಾರಂಭ ಮಾಡಿತ್ತು ಎಂದು ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಟ್ಯಾಂಕ್‌ನಿಂದ ಆಮ್ಲಜನಕ ಸೋರಿಕೆಯಾಗುತ್ತಿದ್ದಾಗ ಘಟಕದ ಸುತ್ತಲಿನ ಪ್ರದೇಶದಲ್ಲಿ ಬಿಳಿಯ ಹೊಗೆ ಕಾಣಿಸಿಕೊಂಡಿತು ಎಂದು ಘಟನೆ ನಡೆದ ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ.

ಈ ಆಮ್ಲಜನಕದ ಟ್ಯಾಂಕ್‌ ವಡೋದರ ಮೂಲದ ಇನಾಕ್ಸ್‌ಸಿವಿಎ ಕಂಪನಿಗೆ ಸೇರಿದ್ದು ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ ಎಂದು ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು