ಬುಧವಾರ, ಆಗಸ್ಟ್ 10, 2022
24 °C
‘ವಿಜಯ ದಿನ’

ಸೈನಿಕರ ತ್ಯಾಗವನ್ನು ಸದಾ ನೆನೆಪಿಸಿಕೊಳ್ಳುತ್ತೇವೆ: ರಾಜನಾಥ್‌ ಸಿಂಗ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: 1971ರ ಯುದ್ಧದಲ್ಲಿ ಸೈನಿಕರು ಮಾಡಿದ ತ್ಯಾಗ, ಎಲ್ಲಾ ಭಾರತೀಯರಿಗೆ ಸ್ಫೂರ್ತಿಯಾಗಿದೆ. ದೇಶವು ಅವರನ್ನು ಸದಾ ನೆನಪಿಸಿಕೊಳ್ಳುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಬುಧವಾರ ಹೇಳಿದರು.

1971ರ ಡಿಸೆಂಬರ್‌ 16ರಂದು ಪಾಕಿಸ್ತಾನದ ವಿರುದ್ಧ ಭಾರತ ವಿಜಯ ಸಾಧಿಸಿತು. ಈ ಪ್ರಯುಕ್ತ ದೇಶದಾದ್ಯಂತ ಡಿಸೆಂಬರ್‌ 16 ಅನ್ನು ‘ವಿಜಯ ದಿನ’ ಎಂದು ಆಚರಿಸಲಾಗುತ್ತದೆ. ಇದೇ ದಿನ ಬಾಂಗ್ಲಾದೇಶ ಕೂಡ ರೂಪುಗೊಂಡಿತು.

ಇದನ್ನೂ ಓದಿ: 

‘ಇಂದು ‘ವಿಜಯ ದಿನ’ದ ಸಂದರ್ಭದಲ್ಲಿ ನಾನು ಭಾರತೀಯ ಸೇನೆಯ ಧೈರ್ಯ ಮತ್ತು ಶೌರ್ಯಕ್ಕೆ ವಂದಿಸುತ್ತೇನೆ. 1971ರ ಯುದ್ಧದಲ್ಲಿ ಸೈನಿಕರು ತಮ್ಮ ಶೌರ್ಯದ ಹೊಸ ಕಥೆಯನ್ನು ಬರೆದಿದ್ದಾರೆ’ ಎಂದು ರಾಜನಾಥ್‌ ಸಿಂಗ್‌ ಟ್ವೀಟ್‌ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು