ಗುರುವಾರ , ಆಗಸ್ಟ್ 18, 2022
24 °C

ಸೈಬರ್‌ ವಂಚನೆಯಿಂದ ಹಣ ನಷ್ಟ: ಸಹಾಯವಾಣಿಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಸೈಬರ್‌ ವಂಚನೆಯಿಂದ ಹಣ ಕಳೆದುಕೊಳ್ಳುವ ಜನರ ನೆರವಿಗಾಗಿ ಸ್ಥಾಪಿಸಿರುವ ಸಹಾಯವಾಣಿಗೆ ಗೃಹ ಸಚಿವ ಅಮಿತ್‌ ಶಾ ಗುರುವಾರ ಚಾಲನೆ ನೀಡಿದರು.

ಸೈಬರ್‌ ವಂಚನೆಯಿಂದಾಗಿ ಹಣ ಕಳೆದುಕೊಂಡ ಜನರು ಸಹಾಯವಾಣಿ 155260 ಗೆ ಕರೆ ಮಾಡಿ, ವಂಚನೆ ಕುರಿತು ಮಾಹಿತಿ ನೀಡಬಹುದು. ಅವರಿಗೆ ಹಣ ಮರಳಿಸಲು ಈ ಸಹಾಯವಾಣಿ ನೆರವಾಗಲಿದೆ ಎಂದು ಸಚಿವಾಲಯ ತಿಳಿಸಿದೆ.

ಪ್ರಸ್ತುತ ಛತ್ತೀಸಗಡ, ದೆಹಲಿ, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಉತ್ತರಾಖಂಡ ಹಾಗೂ ಉತ್ತರಪ್ರದೇಶ ರಾಜ್ಯಗಳಲ್ಲಿ ಈ ಸಹಾಯವಾಣಿ ಲಭ್ಯ ಇದೆ. ಇತರ ರಾಜ್ಯಗಳಿಗೆ ಶೀಘ್ರವೇ ಸೇವೆಯನ್ನು ವಿಸ್ತರಿಸಲಾಗುವುದು ಎಂದು ಸಚಿವಾಲಯ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು