ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋತಿಲಾಲ್‌ ವೋರಾ ವಿರುದ್ಧದ ಕ್ರಿಮಿನಲ್‌ ಮೊಕದ್ದಮೆ ರದ್ದು

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ದೆಹಲಿ ನ್ಯಾಯಾಲಯವೊಂದರ ಆದೇಶ
Last Updated 30 ಜನವರಿ 2021, 12:21 IST
ಅಕ್ಷರ ಗಾತ್ರ

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕ ಮೋತಿಲಾಲ್‌ ವೋರಾ ಅವರ ವಿರುದ್ಧ ಇದ್ದ ಕ್ರಿಮಿನಲ್‌ ಮೊಕದ್ದಮೆಯನ್ನು ದೆಹಲಿ ನ್ಯಾಯಾಲಯವೊಂದು ರದ್ದು ಮಾಡಿದೆ. ಕಳೆದಡಿಸೆಂಬರ್‌ನಲ್ಲಿ ವೋರಾ ಅವರು ನಿಧನರಾದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ.

ವೋರಾ ಹಾಗೂ ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಮತ್ತಿತರರ ವಿರುದ್ಧ ಬಿಜೆಪಿ ಸಂಸದ ಸುಬ್ರಮಣಿಯನ್‌ ಸ್ವಾಮಿ ದಾಖಲಿಸಿದ್ದ ಕ್ರಿಮಿನಲ್‌ ದೂರಿನ ವಿಚಾರಣೆ ನಡೆಸುವ ಸಂದರ್ಭದಲ್ಲಿ ನ್ಯಾಯಾಲಯವು ಈ ಆದೇಶ ಹೊರಡಿಸಿದೆ. ಆರೋಪಿಗಳ ಪರ ವಕೀಲ ತರನ್ನುಮ್‌ ಚೀಮಾ ಅವರು, ವೋರಾ ಅವರ ಮರಣ ಪತ್ರವನ್ನು ಸಲ್ಲಿಸಿ, ಅವರ ವಿರುದ್ಧದ ಕ್ರಿಮಿನಲ್‌ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿದ್ದರು.

ಈ ಸಂದರ್ಭದಲ್ಲಿ ವೋರಾ ಅವರ ನಿಧನದ ವರದಿಯನ್ನು ಸಲ್ಲಿಸಲು ಸಂಬಂಧಪಟ್ಟ ಠಾಣೆಯ ಪೊಲೀಸ್‌ ಮುಖ್ಯಸ್ಥರಿಗೆ ನ್ಯಾಯಾಲಯವು ನೋಟಿಸ್‌ ನೀಡಿತು. ಈ ವರದಿಯನ್ನು ಆಧರಿಸಿ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಸಚಿನ್ ಗುಪ್ತಾ ಈ ಆದೇಶ ಹೊರಡಿಸಿದ್ದಾರೆ. ಇತರೆ ಆರೋಪಿಗಳ ವಿರುದ್ಧ ಪ್ರಕರಣವು ಮುಂದುವರಿಯಲಿದ್ದು, ಫೆ.11ಕ್ಕೆ ವಿಚಾರಣೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT