ಎನ್ಎಂಸಿಯಿಂದ ಪಾರದರ್ಶಕತೆ: ಮೋದಿ

ಚೆನ್ನೈ: ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ರಾಷ್ಟ್ರೀಯ ವೈದ್ಯಕೀಯ ಆಯೋಗವು (ಎನ್ಎಂಸಿ)ಬಹಳಷ್ಟು ಪಾರದರ್ಶಕತೆಯನ್ನು ತರುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದರು.
ಇಲ್ಲಿನ ತಮಿಳುನಾಡು ಡಾ.ಎಂ.ಜಿ.ಆರ್ ವೈದ್ಯಕೀಯ ವಿಶ್ವವಿದ್ಯಾಲಯದ 33ನೇ ಘಟಿಕೋತ್ಸವವನ್ನು ಉದ್ದೇಶಿಸಿ ವಿಡಿಯೊ ಕಾನ್ಫರೆನ್ಸ್ ಮೂಲಕ ಅವರು ಮಾತನಾಡಿದರು.
‘ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಪರಿವರ್ತನೆ ತರಲು ಸರ್ಕಾರ ಶ್ರಮಿಸುತ್ತಿದೆ. ಇದರ ಭಾಗವಾಗಿ ಅಸ್ತಿತ್ವಕ್ಕೆ ತರಲಾಗಿರುವ ಆಯೋಗವು ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಿ, ಉತ್ತಮ ಮಾನವ ಸಂಪನ್ಮೂಲ ಲಭ್ಯವಾಗುವಂತೆ ಮಾಡುವುದು’ ಎಂದು ಹೇಳಿದರು.
ಕಳೆದ ಆರು ವರ್ಷಗಳ ಅವಧಿಯಲ್ಲಿ 30,000 ಎಂಬಿಬಿಎಸ್ ಸೀಟುಗಳನ್ನು ಹೆಚ್ಚಿಸಲಾಗಿದೆ. ಇದು 2014ರಲ್ಲಿದ್ದ ಸೀಟುಗಳ ಸಂಖ್ಯೆಯಲ್ಲಿ ಶೇ 50ರಷ್ಟು ಹೆಚ್ಚಳ ಮಾಡಿದಂತಾಗಿದೆ ಎಂದೂ ಹೇಳಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.