ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಿಟನ್‌ ರಾಣಿ 2ನೇ ಎಲಿಜಬೆತ್‌ ಗೌರವಾರ್ಥ ಇಂದು ಭಾರತದಾದ್ಯಂತ ಶೋಕಾಚರಣೆ

Last Updated 11 ಸೆಪ್ಟೆಂಬರ್ 2022, 2:27 IST
ಅಕ್ಷರ ಗಾತ್ರ

ನವದೆಹಲಿ: ಬ್ರಿಟನ್‌ನ 2ನೇ ಎಲಿಜಬೆತ್ ಅವರ ಗೌರವಾರ್ಥ ಭಾರತದಲ್ಲಿ ಇಂದು (ಭಾನುವಾರ) ಶೋಕಾಚರಣೆ ಘೋಷಿಸಲಾಗಿದೆ.

ಶೋಕಾಚರಣೆ ಅಂಗವಾಗಿ ದೆಹಲಿಯ ಕೆಂಪು ಕೋಟೆ ಮತ್ತು ರಾಷ್ಟ್ರಪತಿ ಭವನ ಮೇಲೆ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಇಳಿಸಲಾಗಿದೆ.

‘ಈ ಅವಧಿಯಲ್ಲಿ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮಗಳು ನಡೆಯುವುದಿಲ್ಲ’ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಎಲಿಜಬೆತ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿಶ್ವದಾದ್ಯಂತ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಬ್ರಿಟನ್‌ನ ರಾಣಿ, 96 ವರ್ಷ ವಯಸ್ಸಿನ 2ನೇ ಎಲಿಜಬೆತ್ ಗುರುವಾರ ರಾತ್ರಿ ನಿಧನರಾದರು. ಬ್ರಿಟಿಷ್‌ ಇತಿಹಾಸದಲ್ಲಿಯೇ ಸುದೀರ್ಘ ಕಾಲ ರಾಣಿಯಾಗಿದ್ದ ಹಿರಿಮೆ ಅವರದು.

ಬಂಕಿಂಗ್‌ಹ್ಯಾಮ್‌ ಅರಮನೆ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದೆ. ರಾಣಿಯ ಗೌರವಾರ್ಥ ಬ್ರಿಟನ್‌ನಲ್ಲಿ 10 ದಿನ ರಾಷ್ಟ್ರೀಯ ಶೋಕ ಘೋಷಿಸಿದೆ. ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಅವರ ದೀರ್ಘಾವಧಿಯ ಬದುಕು ಮತ್ತು ಆಡಳಿತ ಕುರಿತು ಸಂತಾಪದ ಮಾತುಗಳು ಕೇಳಿ ಬರುತ್ತಿವೆ.

ರಾಣಿಯ ಪಾರ್ಥಿವ ಶರೀರವನ್ನು ಬಾಲ್‌ಮೊರಲ್‌ ಎಸ್ಟೇಟ್‌ನಲ್ಲಿ ಇಡಲಾಗಿದೆ ಎಂದು ಅರಮನೆಯ ಹೇಳಿಕೆಯು ತಿಳಿಸಿದೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT