ಸೋಮವಾರ, ಸೆಪ್ಟೆಂಬರ್ 20, 2021
20 °C

ಇಂದು ಮಮತಾ ಬ್ಯಾನರ್ಜಿ – ಸೋನಿಯಾ ಗಾಂಧಿ ಭೇಟಿ ಸಾಧ್ಯತೆ

ಡೆಕ್ಕನ್ ಹೆರಾಲ್ಡ್ Updated:

ಅಕ್ಷರ ಗಾತ್ರ : | |

ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಇಂದು (ಸೋಮವಾರ) ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗುವ ನಿರೀಕ್ಷೆಯಿದೆ. ಮಮತಾ ಅವರು ಈಗಾಗಲೇ ದೆಹಲಿ ತಲುಪಿದ್ದಾರೆ.

ಬ್ಯಾನರ್ಜಿಯವರು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಅವರನ್ನೂ ಭೇಟಿ ಮಾಡುವ ಸಾಧ್ಯತೆ ಇದೆ. ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಭರ್ಜರಿ ಗೆಲುವು ದಾಖಲಿಸಿತ್ತು. ಸಮಾಜವಾದಿ ಪಕ್ಷ, ಆಮ್ ಆದ್ಮಿ ಪಕ್ಷ, ರಾಷ್ಟ್ರೀಯ ಜನತಾದಳ, ಶಿವಸೇನಾ ಮತ್ತು ಇತರ ಪ್ರತಿಪಕ್ಷಗಳ ನಾಯಕರ ಜತೆಯೂ ಮಮತಾ ಬ್ಯಾನರ್ಜಿ ಮಾತುಕತೆ ನಡೆಸುವ ಸಾಧ್ಯತೆ ಇದೆ.

ಓದಿ: 

ತಮ್ಮ ದೆಹಲಿ ಭೇಟಿಯನ್ನು ಬಿಜೆಪಿ ವಿರುದ್ಧ ಪ್ರತಿಪಕ್ಷಗಳನ್ನು ಒಗ್ಗೂಡಿಸುವಲ್ಲಿ ಮತ್ತು ರಾಷ್ಟ್ರ ರಾಜಕಾರಣದಲ್ಲಿ ತಮ್ಮ ವರ್ಚಸ್ಸು ಹೆಚ್ಚಿಸಿಕೊಳ್ಳಲು ಬಳಸಿಕೊಳ್ಳುವುದಕ್ಕೆ ಮಮತಾ ಉತ್ಸುಕರಾಗಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಅಧ್ಯಕ್ಷೆ ಜತೆಗಿನ ಮಾತುಕತೆ ಸೋನಿಯಾ ಗಾಂಧಿ ಅವರ ನಿವಾಸದಲ್ಲೇ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ತಮ್ಮ ನಿವಾಸಕ್ಕೆ ಚಹಾ ಕೂಟಕ್ಕೆ ಬರುವಂತೆ ಮಮತಾಗೆ ಸೋನಿಯಾ ಆಹ್ವಾನ ನೀಡಿದ್ದರು. ಆ ಮೂಲಕ ಕಾಂಗ್ರೆಸ್ ಕೂಡ ಈಗಾಗಲೇ ಟಿಎಂಸಿಗೆ ಹತ್ತಿರವಾಗುವ ಸುಳಿವು ನೀಡಿದೆ ಎನ್ನಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು