ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾದೊಂದಿಗೆ ಮಾತುಕತೆ ವಿಫಲ; ರಾಷ್ಟ್ರೀಯ ಭದ್ರತೆ ಅಪಾಯದಲ್ಲಿ - ರಾಹುಲ್ ಗಾಂಧಿ

ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಆರೋಪ
Last Updated 19 ಏಪ್ರಿಲ್ 2021, 8:51 IST
ಅಕ್ಷರ ಗಾತ್ರ

ನವದೆಹಲಿ: ಚೀನಾದೊಂದಿಗೆ ಕೇಂದ್ರ ಸರ್ಕಾರ ನಡೆಸಿರುವ ಮಾತುಕತೆ ‘ವ್ಯರ್ಥ’ ಎಂದು ಹೇಳಿರುವ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ, ಇದರಿಂದ ರಾಷ್ಟ್ರೀಯ ಭದ್ರತೆಗೆ ಅಪಾಯ ಎದುರಾಗಿದೆ ಎಂದು ಆರೋಪಿಸಿದ್ದಾರೆ.

ಪೂರ್ವ ಲಡಾಖ್‌ನ ಹಾಟ್‌ ಸ್ಪ್ರಿಂಗ್ಸ್‌, ಗೊಗ್ರಾ ಮತ್ತು ಡೆಪಸಾಂಗ್‌ ಪ್ರದೇಶಗಳಿಂದ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳಲು ಚೀನಾ ನಿರಾಕರಿಸಿರುವ ಕುರಿತು ವರದಿಗಳು ಪ್ರಕಟವಾಗಿದ್ದನ್ನು ಉಲ್ಲೇಖಿಸಿ ರಾಹುಲ್ ಗಾಂಧಿ ಟ್ವೀಟ್‌ ಮಾಡಿದ್ದಾರೆ.

‘ಗೊಗ್ರಾ-ಹಾಟ್ ಸ್ಪ್ರಿಂಗ್ಸ್ ಮತ್ತು ಡೆಪ್ಸಾಂಗ್ ಭೂ ಪ್ರದೇಶಗಳಲ್ಲಿ ಚೀನಾ ಆಕ್ರಮಣ ಮುಂದುವರಿದಿದೆ. ಇದು ಡಿಬಿಒ ವಾಯುನೆಲೆ ಸೇರಿದಂತೆ ಭಾರತದ ರಕ್ಷಣಾ ಕಾರ್ಯತಂತ್ರದ ಹಿತಾಸಕ್ತಿಗೆ ಎದುರಾದ ನೇರ ಅಪಾಯವಾಗಿದೆ‘ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪೂರ್ವ ಲಡಾಖ್‌ನ ಇತರ ಪ್ರದೇಶಗಳಲ್ಲಿ ನಡೆದಿರುವ ಸಂಘರ್ಷವನ್ನು ತಡೆಯವಲ್ಲಿ ಚೀನಾದೊಂದಿಗೆ ನಡೆದ ಮಾತುಕತೆಗಳು ಏಕೆ ‘ಫಲಿತಾಂಶ ನೀಡಿಲ್ಲ‘ ಎಂದು ಕಾಂಗ್ರೆಸ್‌ ಪಕ್ಷ ಭಾನುವಾರ ಪ್ರಶ್ನಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT