ಸೋಮವಾರ, ಆಗಸ್ಟ್ 8, 2022
23 °C

ಉದಯಪುರ ಟೈಲರ್ ಹತ್ಯೆ ಬೆನ್ನಲ್ಲೇ ನವೀನ್ ಕುಮಾರ್ ಜಿಂದಾಲ್‌ಗೂ ಕೊಲೆ ಬೆದರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಹತ್ಯೆಯಾದ ಬೆನ್ನಲ್ಲೇ ಅದೇ ರೀತಿಯಲ್ಲಿ ಕೊಲೆ ಮಾಡುವುದಾಗಿ ಬಿಜೆಪಿಯ ದೆಹಲಿ ಘಟಕದ ಮಾಧ್ಯಮ ವಿಭಾಗದ ಮಾಜಿ ಮುಖ್ಯಸ್ಥ ನವೀನ್ ಕುಮಾರ್ ಜಿಂದಾಲ್‌ಗೂ ಬೆದರಿಕೆಯೊಡ್ಡಲಾಗಿದೆ.

ಇ–ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ. ಉದಯಪುರದ ಹತ್ಯೆ ವಿಡಿಯೊದ ಜತೆ ಕೊಲೆ ಬೆದರಿಕೆಯುಳ್ಳ ಸಂದೇಶ ಬಂದಿದ್ದು, ತಮಗೆ ಹಾಗೂ ಕುಟುಂಬದವರಿಗೆ ಭದ್ರತೆ ಒದಗಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಪ್ರವಾದಿ ಮಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಲಾಗಿತ್ತು. ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಹಾಗೂ ಜಿಂದಾಲ್ ಅವಹೇಳನಕಾರಿ ಹೇಳಿಕೆ ನೀಡಿದ್ದ ವಿಚಾರ ದೇಶ, ವಿದೇಶಗಳಲ್ಲಿ ಚರ್ಚೆಗೆ ಗ್ರಾಸವಾಗಿತ್ತು.

‘ಬೆಳಿಗ್ಗೆ 6.45ರ ವೇಳೆಗೆ ಉದಯಪುರದ ಕನ್ಹಯ್ಯ ಲಾಲ್ ಹತ್ಯೆ ವಿಡಿಯೊದ ಜತೆಗೆ ಮೂರು ಇ–ಮೇಲ್ ಸಂದೇಶಗಳು ಬಂದಿವೆ. ಅದೇ ರೀತಿ ನನ್ನ ಹಾಗೂ ಕುಟುಂಬದವರನ್ನು ಹತ್ಯೆ ಮಾಡುವ ಬಗ್ಗೆ ಬೆದರಿಕೆಯೊಡ್ಡಲಾಗಿದೆ’ ಎಂದು ಜಿಂದಾಲ್ ಹೇಳಿದ್ದಾರೆ.

‘ಇದು ಮೊದಲ ಬೆದರಿಕೆಯಲ್ಲ. ನೂರಾರು ಬೆದರಿಕೆ ಸಂದೇಶಗಳು ಸಾಮಾಜಿಕ ಮಾಧ್ಯಮಗಳಲ್ಲಿ ಬಂದಿವೆ. ದೂರವಾಣಿ ಕರೆಗಳು ಹಾಗೂ ಎಸ್‌ಎಂಎಸ್‌ಗಳೂ ಬಂದಿವೆ. ಆದರೆ ದೆಹಲಿ ಪೊಲೀಸರು ನನ್ನ ಭದ್ರತೆ ಹೆಚ್ಚಿಸಿಲ್ಲ. ಹತ್ತಾರು ಬಾರಿ ಪೊಲೀಸ್ ಅಧಿಕಾರಿಗಳಿಗೆ, ಆಯುಕ್ತರಿಗೆ ಪತ್ರ ಬರೆದಿದ್ದೇನೆ’ ಎಂದು ಅವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು