ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮರಿಂದರ್ ಸಿಂಗ್ ಕೇಂದ್ರದ ಕೃಷಿ ಕಾಯ್ದೆಗಳ ರೂವಾರಿ: ನವಜೋತ್‌ ಸಿಂಗ್‌ ಸಿಧು

Last Updated 21 ಅಕ್ಟೋಬರ್ 2021, 15:37 IST
ಅಕ್ಷರ ಗಾತ್ರ

ಚಂಡೀಗಡ: ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್‌ ಅವರನ್ನು ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ರೂವಾರಿ ಎಂದು ಪಂಜಾಬ್‌ ಕಾಂಗ್ರೆಸ್‌ ಮುಖ್ಯಸ್ಥ ನವಜೋತ್‌ ಸಿಂಗ್‌ ಸಿಧು ಆರೋಪಿಸಿದ್ದಾರೆ.

ಸಿಂಗ್‌ ಅವರು ತಮ್ಮದೇ ರಾಜಕೀಯ ಪಕ್ಷ ಕಟ್ಟುವುದಾಗಿ ಘೋಷಿಸಿದ ಎರಡು ದಿನಗಳ ಬಳಿಕ ಸಿಧು ಈ ಹೇಳಿಕೆ ನೀಡಿದ್ದಾರೆ. ಅಲ್ಲದೆ, ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಕೊನೆಗೊಳಿಸಿದ್ದರೆ ಅವರು ಬಿಜೆಪಿಯೊಂದಿಗೆ ಸ್ಥಾನ ಹಂಚಿಕೊಳ್ಳುತ್ತಿದ್ದರು ಎಂದು ಹೇಳಿದ್ದಾರೆ.

ʼಕರಾಳ ಕಾಯ್ದೆಗಳ ರೂವಾರಿ. ಪಂಜಾಬ್‌ಕೃಷಿಗೆಅಂಬಾನಿಯನ್ನು ತಂದವರು, ಪಂಜಾಬ್‌ ರೈತರು, ಸಣ್ಣ ವ್ಯಾಪಾರಿಗಳು, ಕಾರ್ಮಿಕರನ್ನು ನಾಶ ಮಾಡಿದವರು ಮತ್ತು ಒಂದೆರಡು ದೊಡ್ಡ ಕಾರ್ಪೊರೇಟ್‌ ಕಂಪೆನಿಗಳಿಗೆ ಲಾಭ ಮಾಡಿಕೊಟ್ವವರುʼ ಎಂದು ಟ್ವೀಟ್‌ ಮಾಡಿ ಸಿಂಗ್‌ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದ್ದಾರೆ.

ಸಿಂಗ್‌, ಕಳೆದ ತಿಂಗಳು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಚರಣ್‌ಜಿತ್‌ ಸಿಂಗ್‌ ಚನ್ನಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.

ಕಳೆದ ವರ್ಷ ನವೆಂಬರ್ 26ರಿಂದ ದೆಹಲಿ ಗಡಿಯಲ್ಲಿ ಬೀಡುಬಿಟ್ಟಿರುವನೂರಾರು ರೈತರು,ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT