ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್‌ ಸಂಪರ್ಕದಲ್ಲಿರುವ ಸಿಧು ಸಿಎಂ ಆದರೆ ಭದ್ರತೆಗೆ ಅಪಾಯಕಾರಿ: ಅಮರೀಂದರ್ ಸಿಂಗ್‌

Last Updated 18 ಸೆಪ್ಟೆಂಬರ್ 2021, 15:08 IST
ಅಕ್ಷರ ಗಾತ್ರ

ಚಂಡೀಗಡ: ನವಜೋತ್‌ ಸಿಂಗ್‌ ಸಿಧು ಅವರುಪಾಕಿಸ್ತಾನದೊಂದಿಗೆ ಸಂಪರ್ಕದಲ್ಲಿದ್ದಾರೆ. ಪಕ್ಷವು ಅವರನ್ನುಪಂಜಾಬ್ ಮುಖ್ಯಮಂತ್ರಿಯನ್ನಾಗಿಸುವ ಕ್ರಮಕ್ಕೆ ಮುಂದಾದರೆ ವಿರೋಧಿಸುವುದಾಗಿ ಅಮರೀಂದರ್‌ ಸಿಂಗ್‌ ಹೇಳಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಈ ಹೇಳಿಕೆ ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿರುವ ಸಿಂಗ್‌, ಸಿಧು ಅವರನ್ನು ಮುಖ್ಯಮಂತ್ರಿಯನ್ನಾಗಿಸುವ ಯಾವುದೇ ನಡೆಯನ್ನು ದೇಶದ ಭದ್ರತೆಯ ದೃಷ್ಟಿಯಿಂದ ವಿರೋಧಿಸುವುದಾಗಿ ಹೇಳಿದ್ದಾರೆ. ಹಾಗೆಯೇ, ಪಂಜಾಬ್‌ ಕಾಂಗ್ರೆಸ್‌ ಮುಖ್ಯಸ್ಥʼಅಸಮರ್ಥʼ ಎಂದೂ ಟೀಕಿಸಿದ್ದಾರೆ.

ʼನವಜೋತ್‌ ಸಿಂಗ್‌ ಸಿಧು ಅಸಮರ್ಥರಾಗಿದ್ದು, ಹಾನಿ ಸೃಷ್ಟಿಸಲಿದ್ದಾರೆ. ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಆಯ್ಕೆಗೆಸಿಧು ಹೆಸರನ್ನು ವಿರೋಧಿಸುತ್ತೇನೆ. ಅವರುಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿದ್ದಾರೆ. ಇದು ರಾಷ್ಟ್ರೀಯ ಭದ್ರತೆಗೂ ಅಪಾಯಕಾರಿʼ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಆದಾಗ್ಯೂ, ಸಿಧು ಅವರನ್ನುಪಂಜಾಬ್‌ ಕಾಂಗ್ರೆಸ್‌ ಮುಖ್ಯಸ್ಥರಾಗಿ ಮುಂದುವರಿಸಬೇಕೇ ಎಂಬುದನ್ನು ಪಕ್ಷವು ನಿರ್ಧರಿಸಲಿದೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT