ಭಾನುವಾರ, ಜುಲೈ 3, 2022
25 °C

ದುರಹಂಕಾರಿ ದೊರೆ: ಅಮರಿಂದರ್‌ ಸಿಂಗ್ ವಿರುದ್ಧ ನವಜೋತ್ ಸಿಧು ವಾಗ್ದಾಳಿ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಚಂಡೀಗಡ: ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರನ್ನು ‘ದುರಹಂಕಾರಿ ದೊರೆ‘ ಎಂದು ಕಾಂಗ್ರೆಸ್‌ ನಾಯಕ ನವಜೋತ್‌ ಸಿಂಗ್‌ ಸಿಧು ಟೀಕಿಸಿದ್ದಾರೆ. ಈ ಕುರಿತು ಸುದ್ದಿಸಂಸ್ಥೆ ‘ಎಎನ್‌ಐ’ ಟ್ವೀಟಿಸಿದೆ.

ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಅಮರಿಂದರ್‌ ಸಿಂಗ್‌ ವಿರುದ್ಧ ವಾಗ್ದಾಳಿ ನಡೆಸಿರುವ ಸಿಧು ‘ನನಗೆ ಬಾಗಿಲು ಮುಚ್ಚಲಾಗಿದೆ ಎಂದು ಕ್ಯಾಪ್ಟನ್(ಅಮರಿಂದರ್ ಸಿಂಗ್‌) ಹೇಳಿದ್ದಾರೆ. ಆದರೆ, ಅವರು ತಮ್ಮ ಮನೆಯಲ್ಲಿ ಕುಳಿತು ಪ್ರಧಾನಿ ಮೋದಿಯವರ ಪಾದಗಳನ್ನು ನೆಕ್ಕುತ್ತಿದ್ದಾರೆ‘ ಎಂದು ಹೇಳಿದ್ದಾರೆ.

ಮುಂಬರುವ ಪಂಜಾಬ್‌ ವಿಧಾನಸಭಾ ಚುನಾವಣೆಯಲ್ಲಿ ಅಮರಿಂದರ್ ಸಿಂಗ್ ಅವರ 'ಪಂಜಾಬ್ ಲೋಕ ಕಾಂಗ್ರೆಸ್' ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುವುದಾಗಿ ಬಿಜೆಪಿ ಘೋಷಿಸಿತ್ತು. 

ಕಾಂಗ್ರೆಸ್‌ ತೊರೆದ ನಂತರ ಅಮರಿಂದರ್‌ ಸಿಂಗ್‌ ಅವರು ‘ಪಂಜಾಬ್‌ ಲೋಕ ಕಾಂಗ್ರೆಸ್‌‘ ಅನ್ನು ಸ್ಥಾಪಿಸಿದ್ದರು. ಪಂಜಾಬ್‌ ಚುನಾವಣೆಯಲ್ಲಿ ಈ ಮೈತ್ರಿಕೂಟವು ಗೆಲುವು ಸಾಧಿಸಲಿದೆ ಎಂಬ ಭರವಸೆಯನ್ನೂ ವ್ಯಕ್ತಪಡಿಸಿದ್ದರು.

ಮುಂದಿನ ವರ್ಷದ ಆರಂಭದಲ್ಲಿ ಪಂಜಾಬ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯುವ ನಿರೀಕ್ಷೆಯಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು