2022ರ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವಂತೆ ಮಾಡುತ್ತೇನೆ: ನವಜೋತ್ ಸಿಧು

ಚಂಡೀಗಢ: ಪಂಜಾಬ್ ಪ್ರದೇಶ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಒಂದು ತಿಂಗಳ ಬಳಿಕ ಹಿಂಪಡೆದಿರುವ ನವಜೋತ್ ಸಿಂಗ್ ಸಿಧು, 2022ರ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲುವಂತೆ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ನವಜೋತ್ ಸಿಂಗ್ ಸಿಧು, 'ನಾನು ರಾಜೀನಾಮೆಯನ್ನು ಹಿಂಪಡೆದಿದ್ದೇನೆ' ಎಂದು ಸ್ಪಷ್ಟಪಡಿಸಿದರು.
'ಕಳೆದ ನಾಲ್ಕೈದು ವರ್ಷಗಳಲ್ಲಿ ಮದ್ಯ, ಬಸ್ ಸಂಚಾರ ಮುಂತಾದ ಪ್ರಮುಖ ವಿಚಾರಗಳಿಗೆ ಸಂಬಂಧಿಸಿ ಜನಪರವಾದ ಹೋರಾಟ ನಡೆಸಿದ್ದೇನೆ. ಮುಖ್ಯಮಂತ್ರಿ ಅಧಿಕಾರವನ್ನೆಲ್ಲಾ ಕೇಂದ್ರೀಕೃತ ಮಾಡಿಕೊಂಡಿದ್ದರು ಆದರೆ ಯಾವುದೇ ಕ್ರಮಗಳನ್ನು ಕೈಗೊಳ್ಳಲಿಲ್ಲ. ನನಗೆ ಯಾವುದೇ ಸ್ಥಾನದ ಮೇಲೆ ಆಸೆ ಇಲ್ಲ. ಪಂಜಾಬ್ ಜನರ ಹಕ್ಕುಗಳಿಗಾಗಿ ಹೋರಾಡುವುದೇ ನನ್ನ ಮುಖ್ಯ ಉದ್ದೇಶ. 2022ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 80-100 ಸ್ಥಾನಗಳನ್ನು ಗೆಲ್ಲುವಂತೆ ಮಾಡುತ್ತೇನೆ' ಎಂದು ಸಿಧು ಭರವಸೆ ವ್ಯಕ್ತಪಡಿಸಿದರು.
ದೇಶಕ್ಕಾಗಿ ವಿಶ್ವಕಪ್ ಗೆಲ್ಲಲು ಬಯಸುತ್ತೇನೆ: ಕೆ.ಎಲ್. ರಾಹುಲ್
ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಾಗಿ ಪುನಃ ಕಾರ್ಯ ಆರಂಭಿಸಿದ ದಿನ ರಾಜ್ಯಕ್ಕೆ ನೂತನ ಅಡ್ವೊಕೇಟ್ ಜನರಲ್ ನೇಮಕವಾಗಲಿದೆ ಎಂದು ಸಿಧು ತಿಳಿಸಿದ್ದಾರೆ.
ರಾಜ್ಯದ ಅಡ್ವೊಕೇಟ್ ಜನರಲ್ ಆಗಿ ಹಿರಿಯ ವಕೀಲ ಎ.ಪಿ.ಸ್. ಡಿಯೋಲ್ ಅವರನ್ನು ನೇಮಕ ಮಾಡಲು ಸಿಧು ಮುಂದಾಗಿದ್ದಾರೆ ಎನ್ನಲಾಗಿದೆ.
ಸಿಧು ಸೆಪ್ಟಂಬರ್ 8ರಂದು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ಬರೆದಿದ್ದ ಸಿಧು, ಪಕ್ಷದಲ್ಲಿ ಮುಂದುವರಿಯುವುದಾಗಿ ತಿಳಿಸಿದ್ದರು.
ಬಾಂಬ್ ದಾಳಿ ಬೆದರಿಕೆಯನ್ನು ಪಂಜಾಬ್ ಸರ್ಕಾರ ಗಂಭೀರವಾಗಿ ಪರಿಗಣಿಸಲಿ: ಅಮರಿಂದರ್
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.