ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯಮಿ ನವನೀತ್‌ ಕಾಲ್ರಾ ಜಾಮೀನು ಅರ್ಜಿ ವಿಚಾರಣೆ ಇದೇ 28ಕ್ಕೆ ಮುಂದೂಡಿಕೆ

Last Updated 25 ಮೇ 2021, 8:21 IST
ಅಕ್ಷರ ಗಾತ್ರ

ನವದೆಹಲಿ: ಆಮ್ಲಜನಕ ಕಾನ್ಸನ್‌ಟ್ರೇಟರ್‌ಗಳ ಅಕ್ರಮ ದಾಸ್ತಾನು ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ನವನೀತ್ ಕಲ್ರಾ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಮಂಗಳವಾರ ದೆಹಲಿ ನ್ಯಾಯಾಲಯವು ಇದೇ 28ಕ್ಕೆ ಮುಂದೂಡಿದೆ.

ಕಾಲ್ರಾ ಒಡೆತನದ ಖಾನಾ ಚಾಚಾ, ಟೌನ್‌ ಹಾಲ್‌, ನೇಗಿ ಮತ್ತು ಜೂ ರೆಸ್ಟೊರೆಂಟ್‌ಗಳಿಂದ ಆಮ್ಲಜನಕ ಕಾನ್ಸನ್‌ಟ್ರೇಟರ್‌ಗಳನ್ನು ವಶಕ್ಕೆ ಪಡೆಯಲಾಗಿತ್ತು. ಈ ಸಂಬಂಧ ನ್ಯಾಯಾಲಯವು ಕಾಲ್ರಾ ಅವರನ್ನು ಜೂನ್‌ 3ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

ಈ ಬಗ್ಗೆ ವಿಚಾರಣೆ ನಡೆಸಿದ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಸ್ವಾತಿ ಶರ್ಮಾ ಅವರು,‘ ಕಾಲ್ರಾ ಪರ ವಕೀಲರಾದ ವಿಶಾಲ್‌ ಗೋರಿ ಮನವಿ ಮೇರೆಗೆ ಜಾಮೀನು ಅರ್ಜಿ ವಿಚಾರಣೆಯನ್ನು ಮೇ 28ರ ಮಧ್ಯಾಹ್ನ 12 ಗಂಟೆಗೆ ಮುಂದೂಡಿದ್ದಾರೆ.

ಮೇ 20 ಮತ್ತು 22 ರಂದು ಎರಡು ಬಾರಿ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿತ್ತು.

ನವನೀತ್‌ ಕಾಲ್ರಾ ಅವರ ನ್ಯಾಯಾಂಗ ಬಂಧನವನ್ನು ಐದು ದಿನಗಳ ಕಾಲ ವಿಸ್ತರಿಸುವಂತೆ ಕೋರಿ ದೆಹಲಿ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ಮೇ 22 ರಂದು ತಿರಸ್ಕರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT