ಶುಕ್ರವಾರ, ಜನವರಿ 21, 2022
30 °C

ಮಾಹಿತಿ ಸೋರಿಕೆ ಆರೋಪ: ನೌಕಾಪಡೆ ಅಧಿಕಾರಿ ಸೇರಿ ಐವರ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಲಂಚಕ್ಕೆ ಪ್ರತಿಯಾಗಿ ‘ಸಬ್‌ಮರಿನ್‌ ಪ್ರಾಜೆಕ್ಟ್‌’ವೊಂದಕ್ಕೆ ಸಂಬಂಧಿಸಿದ ಗೌಪ್ಯ ಮಾಹಿತಿಯನ್ನು ಸೋರಿಕೆ ಮಾಡಿರುವ ಆರೋಪಗಳ ಮೇಲೆ ನೌಕಾಪಡೆಯ ಕಮಾಂಡರ್‌ ಶ್ರೇಣಿಯ ಅಧಿಕಾರಿ ಸೇರಿದಂತೆ ಐವರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.

ಬಂಧಿತರಲ್ಲಿ ನೌಕಾಪಡೆಯ ಇಬ್ಬರು ನಿವೃತ್ತ ಸಿಬ್ಬಂದಿಯೂ ಇದ್ದು, ಆರೋಪಿಗಳ ವಿರುದ್ಧ ಐಪಿಸಿ ಹಾಗೂ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿ, ದೆಹಲಿ, ಮುಂಬೈ, ಹೈದರಾಬಾದ್‌ ಹಾಗೂ ವಿಶಾಖಪಟ್ಟಣ ನಗರಗಳಲ್ಲಿ ಸಿಬಿಐ ಈ ವರೆಗೆ 16 ಸ್ಥಳಗಳಲ್ಲಿ ಶೋಧ ನಡೆಸಿದೆ ಎಂದೂ ಅವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು