ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ನ್ಯಾಯಾಂಗ ಬಂಧನ ಏಪ್ರಿಲ್ 4ರವರೆಗೆ ವಿಸ್ತರಣೆ

Last Updated 21 ಮಾರ್ಚ್ 2022, 11:20 IST
ಅಕ್ಷರ ಗಾತ್ರ

ಮುಂಬೈ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಸಿಪಿ ಮುಖಂಡ, ಮಹಾರಾಷ್ಟ್ರದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ನವಾಬ್‌ ಮಲಿಕ್‌ ಅವರಿಗೆ ವಿಧಿಸಲಾಗಿರುವ ನ್ಯಾಯಾಂಗ ಬಂಧನದ ಅವಧಿಯನ್ನು ವಿಶೇಷ ನ್ಯಾಯಾಲಯ ಏಪ್ರಿಲ್ 4ರವರೆಗೆ ವಿಸ್ತರಣೆ ಮಾಡಿದೆ.

ನ್ಯಾಯಾಂಗ ಬಂಧನದ ಅವಧಿಯಲ್ಲಿ ಹಾಸಿಗೆ, ಕುರ್ಚಿಯ ಸೌಲಭ್ಯ ನೀಡಬೇಕು ಎಂದು ಮಲಿಕ್‌ ಮಾಡಿರುವ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ.

ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಮತ್ತು ಆತನ ಸಹಚರರ ಚಟುವಟಿಕೆಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನವಾಬ್‌ ಮಲಿಕ್‌ ಅವರನ್ನು ಫೆಬ್ರುವರಿ 23ರಂದು ಜಾರಿ ನಿರ್ದೇಶನಾಲಯವು (ಇ.ಡಿ) ಬಂಧಿಸಿತ್ತು.

ತಮ್ಮ ವಿರುದ್ಧ ಇ.ಡಿ. ದಾಖಲಿಸಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಮನವಿ ಮಾಡಿ ಮತ್ತು ವಿಶೇಷ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದನ್ನು ಪ್ರಶ್ನಿಸಿ ಮಲಿಕ್ ಅವರು ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT