ಮಂಗಳವಾರ, ಆಗಸ್ಟ್ 9, 2022
23 °C

ಒಡಿಶಾ: ನಕ್ಸಲರ ಅಡಗುತಾಣ ಭೇದಿಸಿದ ಪೊಲೀಸರು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಭವಾನಿ ಪಟ್ಟಣ, ಒಡಿಶಾ: ‘ಒಡಿಶಾದ ಕಾಳಹಂಡಿ ಜಿಲ್ಲೆಯಲ್ಲಿ ನಕ್ಸಲರ ಅಡಗುತಾಣವೊಂದನ್ನು ಭೇದಿಸಲಾಗಿದ್ದು, 22 ಜೀವಂತ ಮದ್ದುಗುಂಡುಗಳು ಹಾಗೂ ಶಸ್ತ್ರಾಸ್ತ್ರಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಅಭಿಲಾಶ್‌ ಜಿ.ತಿಳಿಸಿದರು.

ಕಳೆದ ಗುರುವಾರ ಭವಾನಿಪಟ್ಟಣ ಉಪವಿಭಾಗದ ರಾಂಪುರ ಬ್ಲಾಕ್‌ನಲ್ಲಿ ವಿಶೇಷ ಕಾರ್ಯಾಚರಣೆ ಗುಂಪು ಮತ್ತು ಒಡಿಶಾ ಪೊಲೀಸ್‌ನ ಜಿಲ್ಲಾ ಸ್ವಯಂಸೇವಾ ಪಡೆ ನಕ್ಸಲ್ ಶಿಬಿರವನ್ನು ಭೇದಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. 

‘ಮುಂಡಮುಸ್ಕಾ ಮೀಸಲು ಅರಣ್ಯದಲ್ಲಿನ ಅಡಗುತಾಣವನ್ನು ಶನಿವಾರ ಶೋಧ ಕಾರ್ಯಾಚರಣೆಯ ವೇಳೆ ಪತ್ತೆಹಚ್ಚಲಾಯಿತು. ಎರಡು ಸುಧಾರಿತ ಸ್ಫೋಟಕ ಸಾಧನಗಳು ಮತ್ತು ಡಿಟೋನೇಟರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರದೇಶದಲ್ಲಿ ಹಿರಿಯ ನಕ್ಸಲ್ ನಾಯಕ ಇದ್ದಿರಬಹುದು’ ಎಂದು ಪೊಲೀಸರು ಶಂಕಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು