ಸೋಮವಾರ, ಜೂನ್ 14, 2021
25 °C

ದಾಂತೇವಾಡದಲ್ಲಿ ಎನ್‌ಕೌಂಟರ್–ನಕ್ಸಲ್‌ ಹತ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ದಾಂತೇವಾಡ: ಛತ್ತೀಸ್‌ಗಡದ ದಾಂತೇವಾಡ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಎನ್‌ಕೌಂಟರ್‌ನಲ್ಲಿ ನಕ್ಸಲ್‌ ಒಬ್ಬ ಹತನಾಗಿದ್ದು, ಸ್ಥಳದಿಂದ 2 ಕೆ.ಜಿ. ಸುಧಾರಿತ ಸ್ಫೋಟಕ ಸಾಮಗ್ರಿ (ಐಇಡಿ), ದೇಸೀ ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಗೀದಂ ಪೊಲೀಸ್ ಠಾಣೆ ವ್ಯಾಪ್ತಿಯ ಮುಸ್ತಲ್‌ನಾರ್‌ ಸಮೀಪ ಬೆಳಿಗ್ಗೆ 7.30ರ ಸುಮಾರಿಗೆ ಗುಂಡಿನ ದಾಳಿ ನಡೆಯಿತು. ಅರ್ಧ ಗಂಟೆ ನಡೆದ ಗುಂಡಿ ನ ಚಕಮಕಿಯ ಬಳಿಕ ರಾಮಚಂದ್ರ ಕರ್ತಿ (20) ಎಂಬಾತನ ಮೃತದೇಹ ಸ್ಥಳದಲ್ಲಿ ಪತ್ತೆಯಾಯಿತು ಎಂದು ಜಿಲ್ಲಾ ಪೊಲೀಸ್‌ ವರಿಷ್ಠ ಅಭಿಷೇಕ್ ಪಲ್ಲವ ತಿಳಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು