ನವದೆಹಲಿ: ಕೇಂದ್ರ ಸರ್ಕಾರದ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿದ್ದು. ಕ್ಯಾಲೆಂಡರ್‌ನ ಹನ್ನೆರಡು ಪುಟಗಳಲ್ಲಿಯೂ ಪ್ರಧಾನಿ ನರೇಂದ್ರ ಮೋದಿಯವರ ಚಿತ್ರಗಳೇ ರಾರಾಜಿಸುತ್ತಿವೆ.
ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು 2023ರ ಭಾರತ ಸರ್ಕಾರದ ಅಧಿಕೃತ ಕ್ಯಾಲೆಂಡರ್ ಅನ್ನು ಅನಾವರಣಗೊಳಿಸಿದ್ದಾರೆ.
ಕೇಂದ್ರ ಸರ್ಕಾರದ ಸಾಧನೆಗಳು ಮತ್ತು ಭವಿಷ್ಯದ ಬದ್ಧತೆಗಳನ್ನು ಪ್ರದರ್ಶಿಸಲು ‘ನಯಾ ವರ್ಷ್, ನಯೇ ಸಂಕಲ್ಪ್’ ಎಂಬ ಘೋಷವಾಕ್ಯವನ್ನಿಟ್ಟುಕೊಂಡು ಈ ಕ್ಯಾಲೆಂಡರ್ಅನ್ನು ರೂಪಿಸಲಾಗಿದೆ.
ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಸ್ವಾತಂತ್ರ್ಯ ದಿನದಂದು ಪ್ರಧಾನಿ ಮೋದಿ ಅವರು ನೀಡಿದ ಐದು ಪ್ರತಿಜ್ಞೆಗಳನ್ನು ನಮಗೆ ನೆನಪಿಸುತ್ತದೆ ಎಂದು ಠಾಕೂರ್ ಹೇಳಿದ್ದಾರೆ.
ಕ್ಯಾಲೆಂಡರ್‌ನಲ್ಲಿ ಪ್ರಮುಖ 12 ವಿಷಯಗಳಿವೆ. ಇವು ಮೋದಿ ಸರ್ಕಾರದ ಎಂಟು ವರ್ಷಗಳ ಸಾರ್ವಜನಿಕ ಕಲ್ಯಾಣ ಮತ್ತು ರಾಷ್ಟ್ರದ ಉನ್ನತಿಗಾಗಿ ಮಾಡಿದ ಪ್ರಯತ್ನಗಳ ಫಲಿತಾಂಶದ ಕಿರುನೋಟವಾಗಿದೆ ಎಂದು ಠಾಕೂರ್ ತಿಳಿಸಿದ್ದಾರೆ.
ಪ್ರಾದೇಶಿಕ ಭಾಷೆಗಳಲ್ಲಿ 2.5 ಲಕ್ಷ ಸೇರಿದಂತೆ ಒಟ್ಟು 13 ಭಾಷೆಗಳಲ್ಲಿ11 ಲಕ್ಷ ಕ್ಯಾಲೆಂಡರ್ ಪ್ರತಿಗಳನ್ನು ಮುದ್ರಿಸಲಾಗಿದ್ದು, ಅವುಗಳನ್ನುದೇಶದಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಪಂಚಾಯತಿಗಳಿಗೆ ವಿತರಿಸಲಾಗುವುದು ಎಂದಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.