ಶ್ರೀನಗರ: ಕಳೆದ ವರ್ಷ ಬಂಡಿಪೋರಾದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆಯ ವೇಳೆ ನಡೆದ ರ‍್ಯಾಲಿಯಲ್ಲಿ 'ದ್ವೇಷ ಭಾಷಣ' ಮಾಡಿದ ಆರೋಪದ ಮೇಲೆ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ನಾಯಕ ಹಿಲಾಲ್ ಲೋನೆ ಅವರನ್ನು ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆಯಡಿ (ಯುಎಪಿಎ) ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಎನ್‌ಸಿ ಸಂಸತ್ ಸದಸ್ಯ ಮೊಹಮ್ಮದ್ ಅಕ್ಬರ್ ಲೋನೆ ಅವರ ಪುತ್ರ ಹಿಲಾಲ್ ಲೋನೆ ಅವರನ್ನು ಸೋಮವಾರ ಇಲ್ಲಿನ ಶಾಸಕರ ಹಾಸ್ಟೆಲ್‌ನಿಂದ ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಹಾಜಿನ್‌ನಲ್ಲಿರುವ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್‌ಐಆರ್‌ನಲ್ಲಿ ಯುಎಪಿಎಯ ವಿವಿಧ ವಿಭಾಗಗಳ ಅಡಿಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಾಗಿತ್ತು.

ಹಾಜಿನ್‌ನಲ್ಲಿ ನಡೆದ ಡಿಡಿಸಿ ಚುನಾವಣೆಯಲ್ಲಿ ಪ್ರಚಾರದ ವೇಳೆ ಸಾರ್ವಜನಿಕ ರ‍್ಯಾಲಿಯಲ್ಲಿ ಅವರು ಮಾಡಿದ ಭಾಷಣಕ್ಕೆ ಈ ಪ್ರಕರಣ ಸಂಬಂಧಿಸಿದೆ ಎಂದು ಅಧಿಕಾರಿ ಹೇಳಿದ್ದಾರೆ. ಕಳೆದ ವರ್ಷ ಡಿಸೆಂಬರ್ 25 ರಂದು ಅವರನ್ನು ಬಂಡೀಪೋರಾದ ಸುಂಬಲ್ ಪ್ರದೇಶದಲ್ಲಿ ಬಂಧಿಸಿ ನಂತರ ಶಾಸಕರ ಹಾಸ್ಟೆಲ್‌ಗೆ ಸ್ಥಳಾಂತರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.