ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ: ನೈಜೀರಿಯಾದ ಇಬ್ಬರು ಡ್ರಗ್ಸ್‌ ಪೆಡ್ಲರ್‌ಗಳ ಬಂಧನ

Last Updated 31 ಆಗಸ್ಟ್ 2021, 9:42 IST
ಅಕ್ಷರ ಗಾತ್ರ

ಮುಂಬೈ: ಬಾಲಿವುಡ್‌ ನಟ ಅರ್ಮಾನ್‌ ಕೊಹ್ಲಿ ವಿರುದ್ಧದ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನೈಜೀರಿಯಾದ ಇಬ್ಬರು ಪ್ರಜೆಗಳನ್ನು ಮಾದಕವಸ್ತು ನಿಯಂತ್ರಣ ದಳವು (ಎನ್‌ಸಿಬಿ) ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದರು.

‘ಮುಂಬೈ ಮತ್ತು ನೆರೆಯ ಉಪನಗರದ ಹಲವೆಡೆ ಸೋಮವಾರ ರಾತ್ರಿ ಎನ್‌ಸಿಬಿಯ ಮುಂಬೈ ವಲಯ ಘಟಕವು ದಾಳಿ ನಡೆಸಿದೆ. ಈ ವೇಳೆ ನೈಜೀರಿಯಾದ ಇಬ್ಬರು ಡ್ರಗ್‌ ಪೆಡ್ಲರ್‌ಗಳಿಂದ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಅವರು ಹೇಳಿದರು.

ಎನ್‌ಸಿಬಿಯು ಭಾನುವಾರ ಮುಂಜಾನೆ ಅರ್ಮಾನ್‌ ಕೊಹ್ಲಿ ಮನೆಯಲ್ಲಿ ಶೋಧ ನಡೆಸಿತ್ತು. ಆಗ ಅಧಿಕಾರಿಗಳಿಗೆ ಸಣ್ಣ ಪ್ರಮಾಣದಲ್ಲಿ ಕೊಕೇನ್ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಅರ್ಮಾನ್‌ ಕೊಹ್ಲಿಯನ್ನು ಬಂಧಿಸಲಾಗಿತ್ತು. ಪ್ರಕರಣದ ತನಿಖೆ ವೇಳೆ ಡ್ರಗ್ಸ್‌ನ ಮೂಲ ದಕ್ಷಿಣ ಆಫ್ರಿಕಾ ಎಂಬುದು ತಿಳಿದುಬಂದಿದೆ.

‘ಮುಂಬೈಗೆ ಯಾವ ಮಾರ್ಗ ಮತ್ತು ಮೂಲಗಳ ಮೂಲಕ ಕೊಕೇನ್ ಅನ್ನು ತರಲಾಗಿದೆ ಎಂಬುದರ ಬಗ್ಗೆ ಪತ್ತೆ ಹಚ್ಚಲಾಗುತ್ತಿದೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT