ಶುಕ್ರವಾರ, ಫೆಬ್ರವರಿ 26, 2021
20 °C

ಡ್ರಗ್ಸ್‌ ಪ್ರಕರಣ: ದಾವೂದ್‌ ಸಹಚರನ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಸಹಚರ ಪರ್ವೇಜ್‌ ಖಾನ್‌ ಅಲಿಯಾಸ್‌ ಚಿಂಕು ಪಠಾಣ್‌ ಎಂಬಾತನನ್ನು ಮಾದಕವಸ್ತುಗಳ ನಿಯಂತ್ರಣ ಸಂಸ್ಥೆ (ಎನ್‌ಸಿಬಿ) ಅಧಿಕಾರಿಗಳು ನವಿಮುಂಬೈನಲ್ಲಿ ಬುಧವಾರ ಬಂಧಿಸಿದ್ದಾರೆ.

‘ಎನ್‌ಸಿಬಿಯ ವಲಯ ನಿರ್ದೇಶಕ ಸಮೀರ್‌ ವಾಂಖೆಡೆ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ, ನವಿಮುಂಬೈನ ಪ್ರದೇಶವೊಂದರಲ್ಲಿ ಅವಿತಿದ್ದ  ಪರ್ವೇಜ್‌ ಖಾನ್‌ನನ್ನು ಬಂಧಿಸಿತು. ಈ ವೇಳೆ ಕೆಲವು ಡ್ರಗ್ಸ್‌ಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ’ ಎಂದು ಎನ್‌ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಮೆಫೆಡ್ರೋನ್‌ (ಎಂಡಿ) ಎಂಬ ಮಾದಕವಸ್ತುವಿನ ಮಾರಾಟ ಜಾಲಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಕೆಲವು ಪೆಡ್ಲರ್‌ಗಳೊಂದಿಗೆ ಸಹ ಪರ್ವೇಜ್‌ ಸಂಪರ್ಕ ಹೊಂದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು