ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡ್ರಗ್ಸ್‌ ಪ್ರಕರಣ: ಎನ್‌ಸಿಬಿಯಿಂದ ಸುಶಾಂತ್‌ ಸಿಂಗ್‌ ಸ್ನೇಹಿತ ಸಿದ್ಧಾರ್ಥ್‌ ಬಂಧನ

Last Updated 28 ಮೇ 2021, 14:44 IST
ಅಕ್ಷರ ಗಾತ್ರ

ಮುಂಬೈ: ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್ ಸಾವು ಪ್ರಕರಣಕ್ಕೆ ತಳಕು ಹಾಕಿಕೊಂಡಿರುವ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಸಂಸ್ಥೆ (ಎನ್‌ಸಿಬಿ) ಸಿದ್ಧಾರ್ಥ್ ಅವರನ್ನು ಬಂಧಿಸಿದೆ.

ಸುಶಾಂತ್‌ ಅವರ ಸ್ನೇಹಿತ ಸಿದ್ಧಾರ್ಥ್‌ ಪಿಠಾಣಿ ಅವರನ್ನು ಹೈದರಾಬಾದ್‌ನಿಂದ ಎನ್‌ಸಿಬಿ ಬಂಧಿಸಿರುವುದಾಗಿ ವರದಿಯಾಗಿದೆ.

2020ರ ಜೂನ್‌ 14ರಂದು ಸುಶಾಂತ್‌ ಸಿಂಗ್‌ ತಮ್ಮ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಸುಶಾಂತ್‌ ವಾಸಿಸುತ್ತಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಸಿದ್ಧಾರ್ಥ್‌ ಪಿಠಾಣಿ ಸಹ ವಾಸವಾಗಿದ್ದರು.

ಸುಶಾಂತ್ ಸಿಂಗ್ ಅವರ ತಂದೆ ಪಟ್ನಾದಲ್ಲಿ ದಾಖಲಿಸಿದ್ದ ವಂಚನೆ, ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ವೇಳೆ ಮಾದಕವಸ್ತು ಪೂರೈಕೆಗೆ ಸಂಬಂಧಿಸಿದ ಕೆಲವು ಸಾಕ್ಷ್ಯಗಳನ್ನು ಜಾರಿ ನಿರ್ದೇಶನಾಲಯವು ಕಲೆ ಹಾಕಿತ್ತು. ಈ ಸಾಕ್ಷ್ಯಗಳನ್ನು ಎನ್‌ಸಿಬಿಗೆ ಹಸ್ತಾಂತರಿಸಿತ್ತು. 2020ರ ಸೆಪ್ಟೆಂಬರ್‌ನಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಎನ್‌ಸಿಬಿ, ಈಗಾಗಲೇ ಆರೋಪಪಟ್ಟಿ ಸಲ್ಲಿಸಿದೆ.

ರಿಯಾ ಚಕ್ರವರ್ತಿ ಮತ್ತು ಅವರ ಸೋದರ ಶೋವಿಕ್ ಚಕ್ರವರ್ತಿ ಸೇರಿದಂತೆ 33 ಜನರನ್ನು ಆರೋಪಪಟ್ಟಿಯಲ್ಲಿ ಹೆಸರಿಸಲಾಗಿದೆ. ಸುಶಾಂತ್ ಅವರ ಮನೆಯ ಕೆಲಸದಾಳುಗಳ ಹೆಸರೂ ಆರೋಪಪಟ್ಟಿಯಲ್ಲಿ ಇದೆ.

ತನಿಖೆಯ ವೇಳೆ ಭಾರಿ ಪ್ರಮಾಣದಲ್ಲಿ ಚರಸ್, ಗಾಂಜಾ, ಎಲ್‌ಎಸ್‌ಡಿ ಮತ್ತು ಎಕ್ಸ್‌ಟೆಸಿ ಮಾದಕವಸ್ತುಗಳನ್ನು ವಶಕ್ಕೆ ಪಡೆಯಲಾಗಿತ್ತು. ಅಲ್ಲದೆ, ಮತ್ತು ಬರಿಸುವ ಔಷಧಗಳನ್ನೂ ಭಾರಿ ಪ್ರಮಾಣದಲ್ಲಿ ವಶಕ್ಕೆ ಪಡೆಯಲಾಗಿತ್ತು ಎಂದು ಎನ್‌ಸಿಬಿ ಈ ಹಿಂದೆ ತಿಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT