ಗುರುವಾರ , ಮೇ 6, 2021
25 °C

ಡ್ರಗ್ಸ್ ಪ್ರಕರಣ: ಬಾಲಿವುಡ್ ನಟ ಅಜಾಜ್ ಖಾನ್‌ರನ್ನು ವಶಕ್ಕೆ ಪಡೆದ ಎನ್‌ಸಿಬಿ

ಪಿಟಿಐ‌ Updated:

ಅಕ್ಷರ ಗಾತ್ರ : | |

ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಮತ್ತು ಬಿಗ್ ಬಾಸ್ ಮಾಜಿ ಸ್ಪರ್ಧಿ ಅಜಾಜ್ ಖಾನ್ ಅವರನ್ನು ಮಾದಕವಸ್ತು ನಿಯಂತ್ರಣ ದಳ (ಎನ್‌ಸಿಬಿ) ಮಂಗಳವಾರ ವಶಕ್ಕೆ ಪಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಡ್ರಗ್ ಪೆಡ್ಲರ್ ಶಾದಾಬ್ ಬಟಾಟಾ ಅವರ ವಿಚಾರಣೆ ವೇಳೆ ಖಾನ್ ಅವರ ಹೆಸರೂ ಕೇಳಿಬಂದಿತ್ತು. ಈ ಸಂಬಂಧ ಅಜಾಜ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ತಂಡವು ಅಜಾಜ್ ಖಾನ್ ಜೊತೆಗೆ ಅಂಧೇರಿ ಮತ್ತು ಲೋಖಾಂಡವಾಲಾ ಪ್ರದೇಶಗಳಲ್ಲಿ ಶೋಧಕಾರ್ಯ ನಡೆಸಿದೆ.

ಎನ್‌ಸಿಬಿ ಕಚೇರಿಗೆ ಭೇಟಿ ನೀಡಿದ ನಂತರ ಖಾನ್‌ ಅವರನ್ನು ವಶಕ್ಕೆ ಪಡೆಯಲಾಗಿದೆ. ಖಾನ್ ಅವರ ಹೇಳಿಕೆಯನ್ನು ಎನ್‌ಸಿಬಿ ಅಧಿಕಾರಿಗಳು ದಾಖಲಿಸುತ್ತಿದ್ದಾರೆ. ಇನ್ನೂ ಬಂಧಿಸಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

ಮಂಗಳವಾರವಷ್ಟೇ ಮುಂಬೈಗೆ ಬಂದಿಳಿದಿದ್ದ ಅಜಾಜ್ ಖಾನ್, ದಕ್ಷಿಣ ಮುಂಬೈನ ಎನ್‌ಸಿಬಿ ಕಚೇರಿಯ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿ, ನನ್ನನ್ನು ಬಂಧಿಸಿಲ್ಲ. ಆದರೆ ಸ್ವತಃ ನಾನೇ ಅಧಿಕಾರಿಗಳನ್ನು ಭೇಟಿ ಮಾಡಲು ಬಂದಿರುವುದಾಗಿ ತಿಳಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು