ಬುಧವಾರ, ಡಿಸೆಂಬರ್ 2, 2020
26 °C

ಡ್ರಗ್ಸ್‌ ಪ್ರಕರಣ: ಭಾರ್ತಿ ಸಿಂಗ್ ಮನೆ ಮೇಲೆ ಎನ್‌ಸಿಬಿ ದಾಳಿ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಎನ್‌ಸಿಬಿ ಅಧಿಕಾರಿಗಳು ಶನಿವಾರ ಹಾಸ್ಯನಟಿ ಭಾರ್ತಿ ಸಿಂಗ್ ಮತ್ತು ಅವರ ಪತಿ ಹರ್ಷ್ ಅವರ ನಿವಾಸದ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಿದ್ದು, ಅಲ್ಪಪ್ರಮಾಣದ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ.

ಚಿತ್ರೋದ್ಯಮದಲ್ಲಿ ಮಾದಕವಸ್ತು ಬಳಕೆಯಾಗುತ್ತಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಸಿಬಿ ವಲಯ ನಿರ್ದೇಶಕ ಸಮೀರ್‌ ವಾಂಖೇಡೆ ನೇತೃತ್ವದ ತಂಡ ಖಚಿತ ಮಾಹಿತಿ ಆಧರಿಸಿ ಇಲ್ಲಿನ ಲೋಖಂಡವಾಲಾದಲ್ಲಿರುವ ನಿವಾಸದಲ್ಲಿ ದಾಳಿ ನಡೆಸಿತು ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪೆಡ್ಲರ್‌ರೊಬ್ಬರ ವಿಚಾರಣೆ ವೇಳೆ ಭಾರ್ತಿ ಸಿಂಗ್ ಅವರ ಹೆಸರು ಕೇಳಿಬಂದಿತ್ತು. ಅಲ್ಲದೆ, ಇನ್ನೂ ಎರಡು ಕಡೆ ಎನ್‌ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಭಾರ್ತಿ ಸಿಂಗ್ ಅವರು ಹಲವು ಕಾಮಿಡಿ ಮತ್ತು ರಿಯಾಲಿಟಿ ಷೋಗಳಲ್ಲಿ ಕಾಣಿಸಿಕೊಂಡಿದ್ದು, ಕೆಲವು ಷೋಗಳನ್ನು ನಡೆಸಿಕೊಡುತ್ತಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು