ಶುಕ್ರವಾರ, ಮಾರ್ಚ್ 31, 2023
22 °C

ಭಾರತ್‌ ಜೋಡೊ ಯಾತ್ರೆಗೆ ಮಹಾರಾಷ್ಟ್ರದಲ್ಲಿ ಶರದ್‌ ಪವಾರ್ ಸ್ವಾಗತ?

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ (ಪಿಟಿಐ): ‘ಭಾರತ್‌ ಜೋಡೊ ಯಾತ್ರೆಯು ಮುಂದಿನ ತಿಂಗಳು ಮಹಾರಾಷ್ಟ್ರ ಪ್ರವೇಶಿಸುವಾಗ ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಮತ್ತು ಅವರ ಮಗಳು ಸುಪ್ರಿಯಾ ಸುಳೆ ಅವರು ಯಾತ್ರೆಗೆ ಸ್ವಾಗತ ಕೋರುವ ಸಾಧ್ಯತೆ ಇದೆ’ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

‘ಯಾತ್ರೆಯು ನವೆಂಬರ್‌ 9ರಂದು ಮಹಾರಾಷ್ಟ್ರ ಪ್ರವೇಶಿಸಲಿದ್ದು, ಯಾತ್ರೆಗೆ ಸ್ವಾಗತ ಕೋರಲು ಶರದ್‌ ಪವಾರ್‌ ಮತ್ತು ಸುಪ್ರಿಯಾ ಸುಳೆ ಆಸಕ್ತಿ ತೋರಿದ್ದಾರೆ. ಇದೇ 18ರಿಂದ 21ರವರೆಗೆ ಆಂಧ್ರಪ್ರದೇಶದಲ್ಲಿ ಯಾತ್ರೆ ನಡೆಯಲಿದ್ದು, ಬಳಿಕ ರಾಯಚೂರು ‍ಪ್ರವೇಶಿಸಲಿದೆ. ಇದೇ 26ರಂದು ತೆಲಂಗಾಣಕ್ಕೆ ಕಾಲಿಡಲಿದೆ’ ಎಂದು ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು