ಶುಕ್ರವಾರ, ಮಾರ್ಚ್ 31, 2023
22 °C

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ನ್ಯಾಷನಲ್‌ ಕಾಂಗ್ರೆಸ್‌ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್‌ ಪವಾರ್‌ ಅವರು ಮುಂಬೈನ ಆಸ್ಪತ್ರೆಯಲ್ಲಿ ಮಂಗಳವಾರ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಮಾಡಿಸಿಕೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಶರದ್‌ ಪವಾರ್‌ ಅವರು ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಬೇಕಿತ್ತು. ಆದರೆ, ಸದ್ಯ ಶಸ್ತ್ರಚಿಕಿತ್ಸೆ ಸಲುವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪವಾರ್‌ ಅವರ ಸಂಬಂಧಿಯೂ ಆಗಿರುವ ಎನ್‌ಸಿಪಿಯ ಹಿರಿಯ ನಾಯಕ ಅಜಿತ್‌ ಪವಾರ್‌ ಸೋಮವಾರ ಹೇಳಿದ್ದರು.

ದಕ್ಷಿಣ ಮುಂಬೈನಲ್ಲಿರುವ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಯಲಿದೆ. 82 ವರ್ಷದ ಪವಾರ್‌, ಈ ಹಿಂದೆಯೇ ಒಂದು ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು