ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾದ ಪವಾರ್

ಮುಂಬೈ (ಪಿಟಿಐ): ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಮಂಗಳವಾರ ಇಲ್ಲಿನ ಆಸ್ಪತ್ರೆಯಲ್ಲಿ ತಮ್ಮ ಬಲಗಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಪಟ್ಟರು ಎಂದು ಪಕ್ಷದ ಕಾರ್ಯಕರ್ತರೊಬ್ಬರು ತಿಳಿಸಿದರು.
ಸದ್ಯ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಹೇಳಿದರು. ಈ ಹಿಂದೆ ಸಹ ಪವಾರ್ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಕಳೆದ ವರ್ಷ ಬಾಯಿಯ ಅಲ್ಸರ್‌ಗೆ ಚಿಕಿತ್ಸೆ ಪಡೆದಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.