ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದಲ್ಲಿರುವುದು ಕುಂಭಕರ್ಣ ಸರ್ಕಾರ: ಎನ್‌ಸಿಪಿ ನಾಯಕ ಜಯಂತ್ ಪಾಟೀಲ್

Last Updated 19 ಮಾರ್ಚ್ 2021, 12:15 IST
ಅಕ್ಷರ ಗಾತ್ರ

ಮುಂಬೈ: ಕೇಂದ್ರದಲ್ಲಿರುವುದು ಕುಂಭಕರ್ಣ ಸರ್ಕಾರ. ರೈತರ ಪ್ರತಿಭಟನೆ, ಇಂಧನ ದರ ಹೆಚ್ಚಳ, ನಿರುದ್ಯೋಗ ಸಮಸ್ಯೆಗಳ ಬಗ್ಗೆ ಈ ಸರ್ಕಾರವನ್ನು ಎಚ್ಚರಿಸುವುದು ಹೇಗೆ ಎಂದು ಮಹಾರಾಷ್ಟ್ರ ಸಚಿವ, ಎನ್‌ಸಿಪಿ ನಾಯಕ ಜಯಂತ್ ಪಾಟೀಲ್ ವ್ಯಂಗ್ಯವಾಡಿದ್ದಾರೆ.

ವಿಶ್ವ ನಿದ್ರಾ ದಿನದಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ವೇಳೆ ಈವರೆಗೆ ಮುನ್ನೂರಕ್ಕೂ ಹೆಚ್ಚು ರೈತರು ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.

ಮುನ್ನೂರಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಸಾವಿರಾರು ಯುವಕರು ಪ್ರತಿದಿನ ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ಪೆಟ್ರೋಲ್, ಡೀಸೆಲ್ ಹಾಗೂ ಎಲ್‌ಪಿಜಿ ದರಗಳು ಗರಿಷ್ಠ ಮಟ್ಟ ತಲುಪಿವೆ. ದೇಶದ ಹಣಕಾಸು ಪರಿಸ್ಥಿತಿ ಐಸಿಯುನಲ್ಲಿದೆ. ಕುಂಭಕರ್ಣ ಸರ್ಕಾರವನ್ನು ಎಬ್ಬಿಸುವುದು ಹೇಗೆ #WorldSleepDay ಎಂದು ಪಾಟೀಲ್ ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಹಾಗೂ ಕನಿಷ್ಠ ಬೆಂಬಲ ಬೆಲೆಗೆ ಕಾತರಿ ನೀಡುವಂತೆ ಆಗ್ರಹಿಸಿ ನೂರಾರು ರೈತರು ಕಳೆದ ನವೆಂಬರ್‌ನಿಂದ ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತ ಸಂಘಟನೆಗಳು ಕೇಂದ್ರ ಸರ್ಕಾರದ ಜೊತೆ ಹಲವು ಸುತ್ತಿನ ಮಾತುಕತೆ ನಡೆಸಿದ್ದು ಒಪ್ಪಂದಕ್ಕೆ ಬರಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT