ಮಂಗಳವಾರ, ಜನವರಿ 31, 2023
27 °C

ಚಿತ್ರ ಪ್ರದರ್ಶನಕ್ಕೆ ಅಡ್ಡಿ: ಎನ್‌ಸಿಪಿ ಮುಖಂಡ ಜಿತೇಂದ್ರ ಅವ್ಹಾದ್‌ ಬಂಧನ‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಮರಾಠಿ ಚಲನಚಿತ್ರವಾದ ‘ಹರ್‌ ಹರ್‌ ಮಹಾದೇವ್‌’ ಪ್ರದರ್ಶನಕ್ಕೆ ಅಡ್ಡಿಪಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಕ್ಷದ (ಎನ್‌ಸಿಪಿ) ಮುಖಂಡ ಜಿತೇಂದ್ರ ಅವ್ಹಾದ್‌ ಹಾಗೂ ಅವರ ಒಂಬತ್ತು ಮಂದಿ ಬೆಂಬಲಿಗರನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಜಿತೇಂದ್ರ ಅವರು, ‘ವರ್ತಕ್‌ ನಗರದ ಪೊಲೀಸ್‌ ಠಾಣೆಯ ಅಧಿಕಾರಿಗಳು ಶುಕ್ರವಾರ ಮಧ್ಯಾಹ್ನ ನನಗೆ ಸಮನ್ಸ್‌ ನೀಡಿ, ಬಂಧಿಸಿದರು’ ಎಂದು ತಿಳಿಸಿದ್ದಾರೆ.

ಛತ್ರಪತಿ ಶಿವಾಜಿ ಮಹಾರಾಜರ ಚರಿತ್ರೆಯನ್ನು ವಿರೂಪಗೊಳಿಸಲಾಗಿದೆಯೆಂದು ಆರೋಪಿಸಿ, ಜಿತೇಂದ್ರ ಮತ್ತು ಅವರ ಬೆಂಬಲಿಗರು ನವೆಂಬರ್‌ 7ರಂದು ಠಾಣೆಯಲ್ಲಿನ ಮಲ್ಟಿಪ್ಲೆಕ್ಸ್‌ ಚಿತ್ರಮಂದಿರವೊಂದರಲ್ಲಿ ಚಿತ್ರದ ಪ್ರದರ್ಶನಕ್ಕೆ ಅಡ್ಡಿಪಡಿಸಿದ್ದರು. ಇದನ್ನು ವಿರೋಧಿಸಿದ ಪ‍್ರೇಕ್ಷಕರ ಮೇಲೂ ಹಲ್ಲೆ ನಡೆಸಿದ್ದರು. ಈ ಕುರಿತು ವರ್ತಕ್‌ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು