ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಪಕ್ಷ ನಾಯಕರ ಮೇಲೆ ಒತ್ತಡ ಹೇರಲು ಇ.ಡಿ. ಬಳಕೆ: ಕೇಂದ್ರದ ವಿರುದ್ಧ ಶರದ್‌ ಕಿಡಿ

Last Updated 4 ಸೆಪ್ಟೆಂಬರ್ 2021, 15:19 IST
ಅಕ್ಷರ ಗಾತ್ರ

ಮುಂಬೈ: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ವಿರೋಧ ಪಕ್ಷಗಳ ನಾಯಕರ ಮೇಲೆ ಒತ್ತಡ ಹೇರಲು ಜಾರಿ ನಿರ್ದೇಶನಾಲಯವನ್ನು (ಇ.ಡಿ) ಬಳಸಿಕೊಳ್ಳುತ್ತಿದೆ ಎಂದು ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಕ್ಷದ (ಎನ್‌ಸಿಪಿ) ನಾಯಕ ಶರದ್‌ ಪವಾರ್‌ ಕಿಡಿಕಾರಿದ್ದಾರೆ.

ಹಾಗೆಯೇ ಪ್ರತಿಭಟನೆಗಳ ಸಂದರ್ಭ ಕೋವಿಡ್‌ ನಿಯಮಾವಳಿಗಳನ್ನು ಪಾಲಿಸುವಂತೆ ಬಿಜೆಪಿ ಕಾರ್ಯಕರ್ತರಿಗೆ ಕೇಂದ್ರ ಸರ್ಕಾರವು ತಿಳಿಸಬೇಕು ಎಂದೂ ಒತ್ತಾಯಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷಗಳ ನಾಯಕರ ಮನೆಗಳ ಮೇಲೆ ಇ.ಡಿ. ದಾಳಿ ಹೆಚ್ಚುತ್ತಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಶರದ್‌, ʼಇದನ್ನು (ಇ.ಡಿ.) ಇತ್ತೀಚಿನ ದಿನಗಳಲ್ಲಿ ಬಳಸಿಕೊಳ್ಳುತ್ತಿರುವಂತೆ ಈ ಹಿಂದೆಯಾವಾಗಲೂ ಬಳಸಿಕೊಂಡಿರಲಿಲ್ಲ. ವಿರೋಧ ಪಕ್ಷಗಳ ನಾಯಕರ ಮೇಲೆ ಒತ್ತಡ ಹೇರಲು ಈ ಸಂಸ್ಥೆಯನ್ನು ಸರ್ಕಾರ ಬಳಸಿಕೊಳ್ಳುತ್ತಿದೆ ಎಂಬುದು ಸ್ಪಷ್ಟವಾಗಿದೆʼ ಎಂದು ಹೇಳಿದ್ದಾರೆ.

ʼಇದು (ಇ.ಡಿ. ಶೋಧ) ಮಹಾರಾಷ್ಟ್ರವೊಂದರಲ್ಲಿ ಮಾತ್ರವಲ್ಲದೆ, ಮಧ್ಯಪ್ರದೇಶ, ರಾಜಸ್ಥಾನ, ಪಂಜಾಬ್‌ ಮತ್ತು ದಕ್ಷಿಣದ ಕೆಲವು ರಾಜ್ಯಗಳಲ್ಲಿಯೂ ಆಗುತ್ತಿದೆʼ ಎಂದು ದೂರಿದ್ದಾರೆ.

ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ನೀಡಿರುವ ಕೋವಿಡ್‌ ಮಾರ್ಗಸೂಚಿಯ ಬಗ್ಗೆ ಮಾತನಾಡಿದ ಎನ್‌ಸಿಪಿ ಮುಖ್ಯಸ್ಥ, ʼಕೋವಿಡ್‌ ನಿಯಂತ್ರಣಕ್ಕೆ ರಾಜ್ಯ ಸರ್ಕಾರಗಳು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳುತ್ತಿದೆ. ಮುಖ್ಯಮಂತ್ರಿ ಮತ್ತು ರಾಜ್ಯ ಸರ್ಕಾರ ಅದನ್ನು ಮಾಡುತ್ತಿದೆ.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ನಡೆಸುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ಆದರೆ, ಕೇಂದ್ರ ಸರ್ಕಾರವು ಒಂದು ನಿಲುವು ತಳೆದಾಗ, ಅದನ್ನು ಆ ಪಕ್ಷದ (ಬಿಜೆಪಿ) ಕಾರ್ಯಕರ್ತರೂ ಪಾಲಿಸಬೇಕುʼ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ಮಾಜಿ ಸಚಿವ ಹಾಗೂ ಎನ್‌ಸಿಪಿ ನಾಯಕ ಅನಿಲ್‌ ದೇಶಮುಖ್‌ ವಿರುದ್ಧದ ವಂಚನೆ ಪ್ರಕರಣದ ತನಿಖೆಯನ್ನು ಇ.ಡಿ. ನಡೆಸುತ್ತಿದೆ. ಇದೇ ವೇಳೆ ಪವಾರ್‌, ಇ.ಡಿ. ಮತ್ತು ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT