ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಸಿಪಿಯ ಅಜಿತ್ ಪವಾರ್ ಮಹಾರಾಷ್ಟ್ರ ವಿಧಾನಸಭೆ ವಿರೋಧ ಪಕ್ಷದ ನಾಯಕ

ಅಕ್ಷರ ಗಾತ್ರ

ಮುಂಬೈ: ಎನ್‌ಸಿಪಿ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಅವರು ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಸೋಮವಾರ ಆಯ್ಕೆಯಾಗಿದ್ದಾರೆ.

ಸದ್ಯ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿರುವಏಕನಾಥ ಶಿಂಧೆ ನೇತೃತ್ವದಲ್ಲಿ ಹಲವು ಶಾಸಕರು ಇತ್ತೀಚೆಗೆ ಬಂಡಾಯ ಘೋಷಿಸಿದ್ದರು. ಇದಾದ ಬಳಿಕಎನ್‌ಸಿಪಿ, ಶಿವಸೇನಾ ಹಾಗೂ ಕಾಂಗ್ರೆಸ್‌ ಪಕ್ಷಗಳನ್ನೊಳಗೊಂಡ 'ಮಹಾ ವಿಕಾಸ ಆಘಾಡಿ' ಮೈತ್ರಿಕೂಟದ ಸರ್ಕಾರ ಪತನಗೊಂಡಿತ್ತು. ಹೀಗಾಗಿ, 31 ತಿಂಗಳು ಮುಖ್ಯಮಂತ್ರಿಯಾಗಿದ್ದಶಿವಸೇನಾ ಮುಖ್ಯಸ್ಥಉದ್ಧವ್‌ ಠಾಕ್ರೆ ಜೂನ್‌ 30ರಂದು ಸಿಎಂ ಸ್ಥಾನದಿಂದ ಕೆಳಗಿಳಿದಿದ್ದರು. ಇದೀಗ ಬಿಜೆಪಿ ಬೆಂಬಲದೊಂದಿಗೆ ಶಿಂಧೆ ಮುಖ್ಯಮಂತ್ರಿಯಾಗಿದ್ದಾರೆ.

ಈ ಬೆಳವಣಿಗೆಗಳ ಬಳಿಕ ಪ್ರಬಲ ಹಾಗೂ ಅನುಭವಿಯನ್ನು ವಿರೋಧ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲು ವಿಪಕ್ಷಗಳು ನಿರ್ಧರಿಸಿದ್ದವು.

ಬಿ.ಕಾಂ ಪದವೀಧರ ಆಗಿರುವ ಅಜಿತ್‌ ಪವಾರ್‌, ಎನ್‌ಸಿಪಿ ಅಧ್ಯಕ್ಷ ಶರದ್‌ ಪವಾರ್‌ ಅವರ ಸಂಬಂಧಿಯೂ ಹೌದು.

62 ವರ್ಷದ ಪವಾರ್‌, ಶಿಂಧೆ ಹಾಗೂ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಎನ್‌ಸಿಪಿ, ಕಾಂಗ್ರೆಸ್‌, ಶಿವಸೇನಾ ಹಾಗೂ ಇತರ ವಿರೋಧ ಪಕ್ಷಗಳ ಗುಂಪನ್ನು ಮುನ್ನಡೆಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT