ಸೋಮವಾರ, ಅಕ್ಟೋಬರ್ 26, 2020
23 °C

ಬಿಹಾರ ವಿಧಾನಸಭೆ ಚುನಾವಣೆ ಕಣಕ್ಕಿಳಿದ ಶರದ್‌ ಪವಾರ್‌ ನೇತೃತ್ವದ ಎನ್‌ಸಿಪಿ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಗುರುವಾರ ಘೋಷಿಸಿರುವ ಶರದ್‌ ಪವಾರ್‌ ನೇತೃತ್ವದ ಎನ್‌ಸಿಪಿ, 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನೂ ಬಿಡುಗಡೆ ಮಾಡಿದೆ.

ಬಿಹಾರ ಚುನಾವಣೆಯಲ್ಲಿನ ತನ್ನ ಭಾಗವಹಿಸುವಿಕೆಯ ಕುರಿತು ಶೀಘ್ರದಲ್ಲೇ ಮಾಹಿತಿ ಹಂಚಿಕೊಳ್ಳುವುದಾಗಿ ಎನ್‌ಸಿಪಿ ಪ್ರಕಟಣೆಯಲ್ಲಿ ತಿಳಿಸಿದೆ. ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ಪಕ್ಷದ ಪ್ರಮುಖ ಸ್ಟಾರ್ ಪ್ರಚಾರಕರಾಗಲಿದ್ದಾರೆ ಎಂದು ಅದು ಹೇಳಿದೆ.

ಮಹಾರಾಷ್ಟ್ರ ಸರ್ಕಾರದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮತ್ತು ಎನ್‌ಸಿಪಿ ಮುಖಂಡ ನವಾಬ್ ಮಲಿಕ್, ಪಕ್ಷದ ಸಂಸದರಾದ ಪ್ರಫುಲ್ ಪಟೇಲ್, ಸುನಿಲ್ ತತ್ಕರೆ, ಸುಪ್ರಿಯಾ ಸುಳೆ ಮತ್ತು ಫೌಜಿಯಾ ಖಾನ್ ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.

243 ಸದಸ್ಯ ಬಲದ ಬಿಹಾರ ವಿಧಾನಸಭೆಯ ಚುನಾವಣೆ ಅಕ್ಟೋಬರ್ 28, ನವೆಂಬರ್ 3 ಮತ್ತು ನವೆಂಬರ್ 7 ರಂದು ಮೂರು ಹಂತಗಳಲ್ಲಿ ನಡೆಯಲಿದೆ. ಮತ ಎಣಿಕೆ ನವೆಂಬರ್ 10 ರಂದು ನಡೆಯಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು