ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಹುಲ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಟ್ವಿಟರ್‌ಗೆ ತಾಕೀತು ಮಾಡಿದ ಮಕ್ಕಳ ಆಯೋಗ

Last Updated 4 ಆಗಸ್ಟ್ 2021, 15:01 IST
ಅಕ್ಷರ ಗಾತ್ರ

ನವದೆಹಲಿ: ನೈರುತ್ಯ ದೆಹಲಿಯಲ್ಲಿ ನಡೆದಿರುವ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಾಲಕಿಯ ಕುಟುಂಬದ ಚಿತ್ರವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವುದಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗ (ಎನ್‌ಸಿಪಿಸಿಆರ್) ಟ್ವಿಟರ್‌ಗೆ ನೋಟಿಸ್ ನೀಡಿದೆ.

ರಾಹುಲ್ ಗಾಂಧಿ ಅವರು ಸಂತ್ರಸ್ತ ಬಾಲಕಿಯ ತಂದೆ ಮತ್ತ ತಾಯಿಯ ಚಿತ್ರವನ್ನು ಟ್ವಿಟರ್‌ನಲ್ಲಿ ಹಾಕಿಕೊಳ್ಳುವ ಮೂಲಕ ಬಾಲಾಪರಾಧ ಕಾಯ್ದೆ ಹಾಗೂ ಫೋಕ್ಸೊ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ ಎಂದು ಎನ್‌ಸಿಪಿಸಿಆರ್ ಈ ವೇಳೆ ಆರೋಪಿಸಿದೆ. ಅಲ್ಲದೇ ಸಂಬಂಧಿಸಿದ ಟ್ವೀಟ್‌ನ್ನು ತೆಗೆದು ಹಾಕುವಂತೆ ಟ್ವಿಟರ್‌ಗೆ ತಾಕೀತು ಮಾಡಿದೆ.

ಬುಧವಾರ ರಾಹುಲ್ ಗಾಂಧಿ ಅವರು ಸಂತ್ರಸ್ತ ಬಾಲಕಿಯ ಕುಟುಂಬದ ಮನೆಗೆ ತೆರಳಿ ಪೋಷಕರಿಗೆ ಸಾಂತ್ವಾನ ಹೇಳಿದ್ದರು. ಈ ವೇಳೆ ಬಾಲಕಿಯ ಕುಟುಂಬದ ಜೊತೆ ಇರುವ ಚಿತ್ರವನ್ನು ಟ್ವಿಟರ್‌ನಲ್ಲಿ ಹಾಕಿ, 'ಬಾಲಕಿಗೆ ನ್ಯಾಯ ಸಿಗುವವರೆಗೂ ಹಿಂದೆ ಸರಿಯುವುದಿಲ್ಲ' ಎಂದು ಬರೆದುಕೊಂಡಿದ್ದರು. ಆದರೆ, ಈ ಬಗ್ಗೆ ಇದುವರೆಗೂ ರಾಹುಲ್ ಗಾಂಧಿ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇನ್ನು ರಾಹುಲ್ ಅವರ ನಡೆ ಖಂಡಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಬಿಜೆಪಿ ವಕ್ತಾರ ಸಂಬೀತ್‌ ಪಾತ್ರ, ‘ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸುವುದು ಕಾನೂನು ರೀತ್ಯಾ ಅಪರಾಧವಾಗಿದೆ. ಆದರೆ, ರಾಹುಲ್ ಗಾಂಧಿಯವರು ಸಂತ್ರಸ್ತೆಯ ಕುಟುಂಬದವರ ಫೋಟೊಗಳನ್ನು ಟ್ವೀಟ್‌ ಮಾಡುವ ಮೂಲಕ ಲೈಂಗಿಕ ದೌರ್ಜನ್ಯದಿಂದ ಮಕ್ಕಳನ್ನು ರಕ್ಷಿಸುವ ‘ಪೋಕ್ಸೊ‘ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ‘ ಎಂದು ಆರೋಪಿಸಿದ್ದರು.

ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನೋಟಿಸ್ ನೀಡಬೇಕೆಂದು ಒತ್ತಾಯಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT