ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಸತಿ ಶಾಲೆಯಲ್ಲಿ ಬಾಲಕಿ ಸಾವು: ತಮಿಳುನಾಡಿಗೆ ಎನ್‌ಸಿಪಿಆರ್ ಅಧ್ಯಕ್ಷ ಭೇಟಿ

Last Updated 20 ಜುಲೈ 2022, 14:11 IST
ಅಕ್ಷರ ಗಾತ್ರ

ನವದೆಹಲಿ: ತಮಿಳುನಾಡಿನ ವಸತಿಶಾಲೆಯೊಂದರಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಬಾಲಕಿಯ ಪ್ರಕರಣದ ಕುರಿತು ತನಿಖೆ ನಡೆಸಲು ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗದ (ಎನ್‌ಸಿಪಿಸಿಆರ್‌) ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ ಅವರು ಮುಂದಿನ ವಾರ ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ.

‘ತಮಿಳುನಾಡಿನ ಕಲ್ಲಕುರಿಚಿಗೆ ಜುಲೈ 27ರಂದು ಭೇಟಿ ನೀಡುತ್ತಿದ್ದೇನೆ’ ಎಂದು ಪ್ರಿಯಾಂಕ್ ಟ್ವೀಟ್ ಮಾಡಿದ್ದಾರೆ.

ಬಾಲಕಿ ಸಾವಿನ ವಿಷಯ ತಿಳಿಯುತ್ತಿದ್ದಂತೆಯೇ ‘ಆಯೋಗವು ಈ ವಿಷಯವನ್ನು ಪರಿಶೀಲಿಸುತ್ತಿದೆ. ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತದೆ’ ಎಂದು ಪ್ರಿಯಾಂಕ್ ಹೇಳಿದ್ದರು.

ಚಿನ್ನಸೇಲಂನ ಖಾಸಗಿ ವಸತಿಶಾಲೆಯೊಂದಲ್ಲಿ 12ನೇ ತರಗತಿ ಓದುತ್ತಿದ್ದ 17 ವರ್ಷದ ಬಾಲಕಿಯು ಜುಲೈ 13ರಂದು ಹಾಸ್ಟೆಲ್‌ನ ಕಾಂಪೌಂಡ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಳು. ಸಾವಿಗೂ ಮುನ್ನ ಬಾಲಕಿಗೆ ಗಾಯಗಳಾಗಿದ್ದವು ಎಂಬುದು ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ತಿಳಿದುಬಂದಿತ್ತು.

ಬಾಲಕಿಯ ಸಾವಿನ ಬಳಿಕ ಪ್ರತಿಭಟನಕಾರರು ಜುಲೈ 17ರಂದು ಖಾಸಗಿ ವಸತಿ ಶಾಲೆಗೆ ನುಗ್ಗಿ ಆಸ್ತಿಯನ್ನು ಧ್ವಂಸಗೊಳಿಸಿ, ಶಾಲಾ ಬಸ್‌ಗಳಿಗೆ ಬೆಂಕಿ ಹಚ್ಚಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT