ಶನಿವಾರ, ಸೆಪ್ಟೆಂಬರ್ 25, 2021
22 °C

ಬಾಲಕಿ ಅತ್ಯಾಚಾರ ಪ್ರಕರಣ: ವಿವರವಾದ ವರದಿ ಕೇಳಿದ ಎನ್‌ಸಿಪಿಸಿಆರ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ನೈರುತ್ಯ ದೆಹಲಿಯಲ್ಲಿ ಒಂಬತ್ತು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳ ಕುರಿತು ವಿವರವಾದ ವರದಿ ನೀಡುವಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್‌) ದೆಹಲಿ ಪೊಲೀಸರನ್ನು ಕೇಳಿದೆ.

ಈ ಕುರಿತು ನೈರುತ್ಯ ದೆಹಲಿಯ ಪೊಲೀಸ್ ಉಪ ಆಯುಕ್ತರಿಗೆ ಪತ್ರ ಬರೆದಿರುವ ಆಯೋಗ, ಪ್ರಕರಣಕ್ಕೆ ಸಂಬಂಧಿಸಿದಂತೆ ಕೈಗೊಂಡ ಕ್ರಮದ ಬಗ್ಗೆ ವಿವರವಾದ ವರದಿಯನ್ನು ಸಲ್ಲಿಸುವಂತೆ ಪತ್ರದಲ್ಲಿ ಕೇಳಿದೆ.

ಈ ಪ್ರಕರಣದ ತನಿಖೆಯ ವೇಳೆ ಸಂತ್ರಸ್ತೆಯ ಗುರುತನ್ನು ಬಹಿರಂಪಡಿಸಬಾರದು. ಹಾಗೆಯೇ ಈ ಘಟನೆಗೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳ ವಿವರವಾದ ವರದಿಯ ಜೊತೆಗೆ, ಸಂತ್ರಸ್ತೆಯ ವಯಸ್ಸಿನ ದಾಖಲಾತಿ, ಎಫ್‌ಐಆರ್‌ ಪ್ರತಿ, ಮರಣೋತ್ತರ ಪರೀಕ್ಷೆಯ ವರದಿಯಂತಹ ದಾಖಲೆಗಳನ್ನು 48 ಗಂಟೆಗಳ ಒಳಗೆ ಆಯೋಗಕ್ಕೆ ಸಲ್ಲಿಸುವಂತೆ ಪತ್ರದಲ್ಲಿ ವಿನಂತಿಸಲಾಗಿದೆ.

ಪೊಲೀಸರ ಪ್ರಕಾರ, ಶಂಕಾಸ್ಪದ ರೀತಿಯಲ್ಲಿ ದಲಿತ ಬಾಲಕಿ ಸತ್ತಿದ್ದು, ಚಿತಾಗಾರದಲ್ಲಿದ್ದ ಪೂಜಾರಿಯೇ ಬಲವಂತವಾಗಿ ಶವವನ್ನು ಸುಟ್ಟು ಹಾಕಿದ್ದಾನೆ ಎಂದು ಬಾಲಕಿಯ ಪೋಷಕರು ಆರೋಪಿಸಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು