ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನದಲ್ಲಿ ದಲಿತ ಶಿಕ್ಷಕಿ ಹತ್ಯೆ: ಸರ್ಕಾರಕ್ಕೆ ವರದಿ ಕೇಳಿದ ಎನ್‌ಸಿಎಸ್‌ಸಿ

Last Updated 18 ಆಗಸ್ಟ್ 2022, 12:58 IST
ಅಕ್ಷರ ಗಾತ್ರ

ಜೈಪುರ: ರಾಜಸ್ಥಾನದಲ್ಲಿ ದಲಿತ ಬಾಲಕನ ಹತ್ಯೆ ಪ್ರಕರಣ ಚರ್ಚೆಯಲ್ಲಿ ಇರುವಾಗಲೇ ದಲಿತ ಶಿಕ್ಷಕಿಗೆ ಬೆಂಕಿ ಹಚ್ಚಿ ಕೊಂದಿರುವ ಘಟನೆ ವರದಿಯಾಗಿದೆ. ಈ ಘಟನೆ ಬಗ್ಗೆ ವರದಿ ನೀಡುವಂತೆ ರಾಜಸ್ಥಾನ ಸರ್ಕಾರಕ್ಕೆಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ (ಎನ್‌ಸಿಎಸ್‌ಸಿ) ಸೂಚಿಸಿದೆ.

ಹಣಕಾಸು ಗಲಾಟೆಯ ಹಿನ್ನೆಲೆಯಲ್ಲಿ 34 ವರ್ಷದ ಶಿಕ್ಷಕಿ ಅನಿತಾ ರೇಗಾರ್‌ಗೆ ಆಕೆಯ ಸಂಬಂಧಿಗಳೇ ಬೆಂಕಿ ಹಚ್ಚಿ ಹತ್ಯೆ ಮಾಡಿದ್ದಾರೆ. ಈ ಘಟನೆಯ ಸಂಪೂರ್ಣ ಮಾಹಿತಿ ನೀಡುವಂತೆಎನ್‌ಸಿಎಸ್‌ಸಿ ಸರ್ಕಾರಕ್ಕೆ ಸೂಚಿಸಿದೆ.

ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಮೃತಳು ತನ್ನ ಸಂಬಂಧಿಕರಿಗೆ ₹2.5 ಲಕ್ಷ ಸಾಲ ನೀಡಿದ್ದರು. ಈ ಹಣವನ್ನು ವಾಪಸ್‌ ಕೊಡುವಂತೆ ಕೇಳಿದಾಗ ಆನಿತಾ ಜೊತೆಗೆ ಜಗಳ ಮಾಡಿದ್ದರು. ಈ ಸಂಬಂಧ ಅನಿತಾ ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಆಗಸ್ಟ್‌ 10ರಂದು ಅನಿತಾ ಮತ್ತೆ ತನ್ನ ಸಂಬಂಧಿಕರಿಗೆ ಹಣ ಕೊಡುವಂತೆ ಕೇಳಿದ್ದಾರೆ. ಈ ವೇಳೆ ಅವರು ಅನಿತಾ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದಾರೆ. ಕೂಡಲೇ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆನಿತಾ ಬುಧವಾರ ಮೃತಪಟ್ಟಿದ್ದಾರೆ.

ಈ ಘಟನೆ ಸಂಬಂಧ ಇಲ್ಲಿನ ಜೈಪುರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ಅನಿತಾ ಆಸ್ಪತ್ರೆಯಲ್ಲಿ ಘಟನೆಯ ಬಗ್ಗೆ ಮಾಹಿತಿ ನೀಡಿದ್ದು ಹಲವರ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT