ಮಂಗಳವಾರ, ನವೆಂಬರ್ 24, 2020
25 °C

ಮಹಾರಾಷ್ಟ್ರದಲ್ಲಿ ಲವ್‌ ಜಿಹಾದ್‌ ಪ್ರಕರಣಗಳ ಸಂಖ್ಯೆ ಏರಿಕೆ: ಮಹಿಳಾ ಆಯೋಗ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಮಹಾರಾಷ್ಟ್ರದಲ್ಲಿ ಲವ್‌ ಜಿಹಾದ್‌ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗವು (ಎನ್‌ಸಿಡಬ್ಲ್ಯು) ಮಂಗಳವಾರ ತಿಳಿಸಿದೆ.

ರಾಜ್ಯದಲ್ಲಿ ಮಹಿಳೆಯರಿಗೆ ಸಂಬಂಧಿಸಿದ ವಿಷಯಗಳು ಹಾಗೂ ಲವ್‌ ಜಿಹಾದ್‌ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದುರ ಕುರಿತು ಎನ್‌ಸಿಡಬ್ಲ್ಯು ಮುಖ್ಯಸ್ಥೆ ರೇಖಾ ಶರ್ಮಾ ಅವರು ಮಂಗಳವಾರ ರಾಜ್ಯಪಾಲ ಭಗತ್‌ಸಿಂಗ್‌ ಕೋಶಿಯಾರಿ ಅವರ ಜೊತೆ ಚರ್ಚೆ ನಡೆಸಿದರು. ಆಯೋಗದ ರಾಜ್ಯ ಘಟಕಕ್ಕೆ ಪೂರ್ಣಾವಧಿ ಮುಖ್ಯಸ್ಥರನ್ನು ನೇಮಿಸುವ ಕುರಿತೂ ಶರ್ಮಾ ಅವರು ಚರ್ಚೆ ನಡೆಸಿದರು ಎಂದು ಎನ್‌ಸಿಡಬ್ಲ್ಯು ಪ್ರಕಟಣೆಯಲ್ಲಿ ತಿಳಿಸಿದೆ. 

‘ಮುಖ್ಯಸ್ಥರು ಇಲ್ಲದೇ ಇರುವ ಕಾರಣ ಅಂದಾಜು ನಾಲ್ಕು ಸಾವಿರ ದೂರುಗಳು ವಿಚಾರಣೆಯಾಗದೆ ಬಾಕಿ ಉಳಿದಿವೆ. ಜೊತೆಗೆ ನಿರ್ಭಯಾ ಅತ್ಯಾಚಾರ ಪ್ರಕರಣದ ನಂತರ ಅತ್ಯಾಚಾರ ಹಾಗೂ ಕೌಟುಂಬಿಕ ದೌರ್ಜನ್ಯದ ಸಂತ್ರಸ್ತೆಯರಿಗಾಗಿ ಸ್ಥಾಪಿಸಲಾಗಿದ್ದ ‘ಒನ್‌ ಸ್ಟಾಪ್‌ ಸೆಂಟರ್‌’ಗಳ ಪೈಕಿ ಮಹಾರಾಷ್ಟ್ರದಲ್ಲಿ 14 ಕೇಂದ್ರಗಳು ನಿರುಪಯುಕ್ತವಾಗಿವೆ’ ಎಂದು ಉಲ್ಲೇಖಿಸಲಾಗಿದೆ. 

‘ರಾಜ್ಯದಲ್ಲಿ ಪೋಕ್ಸೊ ಕಾಯ್ದೆಯಡಿ ದಾಖಲಿಸಲಾದ 188 ಪ್ರಕರಣಗಳು ವಿಚಾರಣೆ ಪೂರ್ಣವಾಗದೆ ಬಾಕಿ ಉಳಿದಿವೆ. ಇವುಗಳನ್ನು ತಕ್ಷಣವೇ ಕೈಗೆತ್ತಿಕೊಳ್ಳಬೇಕು’ ಎಂದು ಶರ್ಮಾ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು