ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ದೌರ್ಜನ್ಯ: ಯೋಗೇಂದ್ರ ಯಾದವ್, ಉಗ್ರಾಹಾನ್‌ಗೆ ಮಹಿಳಾ ಆಯೋಗದಿಂದ ನೋಟಿಸ್

Last Updated 11 ಮೇ 2021, 17:41 IST
ಅಕ್ಷರ ಗಾತ್ರ

ನವದೆಹಲಿ: ಟಿಕ್ರಿ ಗಡಿಯ ರೈತರ ಪ್ರತಿಭಟನಾ ಸ್ಥಳದಲ್ಲಿ 26 ವರ್ಷದಕಾರ್ಯಕರ್ತೆಯ ಮೇಲೆ ಲೈಂಗಿಕ ದೌರ್ಜನ್ಯದ ವರದಿಗಳ ಬಳಿಕ ರಾಷ್ಟ್ರೀಯ ಮಹಿಳಾ ಆಯೋಗವು ಸ್ವರಾಜ್ ಇಂಡಿಯಾ ಮುಖಂಡ ಯೋಗೇಂದ್ರ ಯಾದವ್ ಮತ್ತು ಭಾರತೀಯ ಕಿಸಾನ್ ಯೂನಿಯನ್‌ನ ಏಕ್ತಾ ಉಗ್ರಾಹಾನ್‌ ಅಧ್ಯಕ್ಷ ಜೋಗಿಂದರ್ ಸಿಂಗ್ ಉಗ್ರಾಹಾನ್ ಅವರಿಗೆ ನೋಟಿಸ್ ಜಾರಿ ಮಾಡಿದೆ.

‘ಹರಿಯಾಣದ ಟಿಕ್ರಿ ಗಡಿಯಲ್ಲಿ 26 ವರ್ಷದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯದ ಬಗ್ಗೆ ಯೋಗೇಂದ್ರ ಯಾದವ್ ಮತ್ತು ಸಂಯುಕ್ತ ಕಿಸಾನ್ ಮೋರ್ಚಾದ ಇತರ ಪ್ರತಿಭಟನಾಕಾರರಿಗೆ ತಿಳಿದಿತ್ತು.ಆದರೆ, ದುರಾದೃಷ್ಟವಶಾತ್, ಅವರು ಘಟನೆಯ ಬಗ್ಗೆ ಪೊಲೀಸರಿಗೆ ತಿಳಿಸಿಲ್ಲ ಎಂದು ಆರೋಪಿಸಿದ್ದ ಮಾಧ್ಯಮ ವರದಿಗಳನ್ನು ರಾಷ್ಟ್ರೀಯ ಮಹಿಳಾ ಆಯೋಗವು ಪರಿಗಣಿಸಿದೆ.

‘ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲು ವಿಳಂಬವಾಗಿದ್ದೇಕೆ ಎಂಬ ಕಾರಣ ಕೇಳಿ ಆಯೋಗವು ಯಾದವ್ ಅವರಿಗೆ ನೋಟಿಸ್ ಕಳುಹಿಸಿದೆ. ಬಿಕೆಯು ಏಕ್ತಾ ಉಗ್ರಾಹಾನ್ ಅಧ್ಯಕ್ಷ ಜೋಗಿಂದರ್ ಸಿಂಗ್ ಉಗ್ರಾಹಾನ್ ಅವರಿಂದಲೂ ಆಯೋಗವು ಉತ್ತರ ಬಯಸಿದೆ. ಆಂದೋಲನಕ್ಕೆ ಸಂಬಂಧಿಸಿದ ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಆಯೋಗಕ್ಕೆ ತಿಳಿಸಬೇಕು. 10 ದಿನಗಳಲ್ಲಿಈ ಬಗ್ಗೆ ಉತ್ತರ ಕೊಡಬೇಕು’ ಎಂದು ಆಯೋಗ ತಿಳಿಸಿದೆ.

ಪಶ್ಚಿಮ ಬಂಗಾಳದ ಕಾರ್ಯಕರ್ತೆಯೊಬ್ಬರು ರೈತರ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುವಾಗ ಮತ್ತು ನಂತರ ‘ಕಿಸಾನ್ ಸೋಷಿಯಲ್ ಆರ್ಮಿ’ಗೆ ಸೇರಿದವರು ಎಂದು ಹೇಳಿಕೊಂಡ ಕೆಲವರು ಟಿಕ್ರಿ ಗಡಿಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ವರದಿಗಳ ಬಳಿಕ ಮಹಿಳೆಯರ ಮೇಲಿನ ದೌರ್ಜನ್ಯವನ್ನು ಸಹಿಸುವುದಿಲ್ಲ ಎಂದು ಸಂಯುಕ್ತಾ ಕಿಸಾನ್ ಮೋರ್ಚಾ (ಎಸ್‌ಕೆಎಂ) ಭಾನುವಾರ ಹೇಳಿತ್ತು.

ಟಿಕ್ರಿ ಗಡಿಯ ಪ್ರತಿಭಟನಾ ಸ್ಥಳದಲ್ಲಿ ಕಾರ್ಯಕರ್ತೆಯೊಬ್ಬರ ಮೇಲೆಲೈಂಗಿಕ ದೌರ್ಜನ್ಯದ ಬಗ್ಗೆ ಅದರ ಕೆಲವು ನಾಯಕರಿಗೆತಿಳಿದಿದ್ದರು ಎಂಬ ಆರೋಪದ ಬಗ್ಗೆ ತನಿಖೆ ಮಾಡುವುದಾಗಿ ಆಯೋಗ ತಿಳಿಸಿದೆ. ಲೈಂಗಿಕ ದೌರ್ಜನ್ಯದ ಬಳಿಕ ಮಹಿಳೆ ಹರಿಯಾಣದ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್‌ನಿಂದ ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT