ಭಾನುವಾರ, 11 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆಯರ ಮೇಲಿನ ಅಪರಾಧಗಳ ಸಂಖ್ಯೆ ಶೇ 46ರಷ್ಟು ಹೆಚ್ಚಳ: ಮಹಿಳಾ ಆಯೋಗ

Last Updated 7 ಸೆಪ್ಟೆಂಬರ್ 2021, 10:29 IST
ಅಕ್ಷರ ಗಾತ್ರ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ, ಪ್ರಸಕ್ತ ವರ್ಷದ ಎಂಟು ತಿಂಗಳ ಅವಧಿಯಲ್ಲಿ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ಶೇ 46ರಷ್ಟು ಏರಿಕೆಯಾಗಿದ್ದು, ಇವುಗಳಲ್ಲಿ ಅರ್ಧಕ್ಕೂ ಹೆಚ್ಚಿನ ಪ್ರಕರಣಗಳು ಉತ್ತರ ಪ್ರದೇಶ ರಾಜ್ಯದಲ್ಲಿ ದಾಖಲಾಗಿವೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ತಿಳಿಸಿದೆ.

ಆಯೋಗದ ಮುಖ್ಯಸ್ಥೆ ರೇಖಾ ಶರ್ಮಾ, ‘ಆಯೋಗವು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುತ್ತಾ ಬಂದಿದೆ. ಇದರಿಂದಾಗಿ ಹೆಚ್ಚಿನ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ದೂರುಗಳು ದಾಖಲಾಗುತ್ತಿವೆ‘ ಎಂದು ಹೇಳಿದರು.

ಈ ವರ್ಷದ ಜನವರಿಯಿಂದ ಆಗಸ್ಟ್‌ವರೆಗೆ ಮಹಿಳೆಯರ ಮೇಲೆ ನಡೆದಿರುವ ದೌರ್ಜನ್ಯಗಳ ಕುರಿತು ರಾಷ್ಟ್ರೀಯ ಮಹಿಳಾ ಆಯೋಗ 19,953 ದೂರುಗಳನ್ನು ಸ್ವೀಕರಿಸಿದೆ. 2020ರಲ್ಲಿ ಇದೇ ಅವಧಿಯಲ್ಲಿ 13,618 ದೂರುಗಳು ದಾಖಲಾಗಿದ್ದವು.

ಈ ವರ್ಷದ ಜುಲೈ ತಿಂಗಳಲ್ಲಿ ಆಯೋಗ 3,248 ದೂರುಗಳನ್ನು ಆಯೋಗ ಸ್ವೀಕರಿಸಿತ್ತು ಎಂದು ರೇಖಾ ಶರ್ಮಾ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT