ಈಶಾನ್ಯ ರಾಜ್ಯಗಳ ಜನರ ಸೇವೆಗೆ ಬದ್ಧ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ‘ಈಶಾನ್ಯ ರಾಜ್ಯಗಳ ಜನರ ಶ್ರೇಯೋಭಿವೃದ್ಧಿಗೆ ಎನ್‌ಡಿಎ ಬದ್ಧವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಹೇಳಿದ್ದಾರೆ.
ಬೋಡೊಲ್ಯಾಂಡ್ ಪ್ರಾದೇಶಿಕ ಮಂಡಳಿಯ (ಬಿಟಿಎ) ಅಧಿಕಾರದ ಗದ್ದುಗೆ ಏರಲು ಯುಪಿಪಿಎಲ್‌ಗೆ ಬಿಜೆಪಿ ಬೆಂಬಲ ಪ್ರಕಟಿಸಿದ ಬೆನ್ನಲ್ಲೇ ಟ್ವೀಟ್ ಮಾಡಿರುವ ಮೋದಿ ‘ನಮ್ಮ ಮಿತ್ರಪಕ್ಷ ಯುಪಿಪಿಎಲ್ ಹಾಗೂ ಅಸ್ಸಾಂ ಬಿಜೆಪಿಗೆ ಶುಭಾಶಯಗಳು. ಈ ಮೈತ್ರಿಕೂಟವು ಜನರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿ ಎಂದು ಹಾರೈಸುತ್ತೇನೆ. ಎನ್‌ಡಿಎ ಮೈತ್ರಿಕೂಟದ ಮೇಲೆ ನಂಬಿಕೆ ಇಟ್ಟ ಜನರಿಗೆ ಆಭಾರಿಯಾಗಿದ್ದೇನೆ’ ಎಂದಿದ್ದಾರೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.