ಶನಿವಾರ, ಜುಲೈ 2, 2022
20 °C

ಬಿಹಾರ ಚುನಾವಣೆ: ಎನ್‌ಡಿಎಗೆ ಬಹುಮತ –ಎಬಿಪಿ-ಸಿವೋಟರ್ ಸಮೀಕ್ಷೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: 2020ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಯು ಮೈತ್ರಿಕೂಟ ‘ಎನ್‌ಡಿಎ’ಸರಳ ಬಹುಮತ ಪಡೆಯಲಿದೆ ಎಂದು ಎಬಿಪಿ-ಸಿವೋಟರ್ ನಡೆಸಿದ ಸಮೀಕ್ಷೆ ತಿಳಿಸಿದೆ.

243 ವಿಧಾನಸಭಾ ಸ್ಥಾನಗಳ ಪೈಕಿ, ರಾಷ್ಟ್ರೀಯ ಜನತಾದಳ (ಆರ್ ಜೆಡಿ), ಕಾಂಗ್ರೆಸ್ ಮತ್ತು ಇತರೆ ಪಕ್ಷಗಳ ಮಹಾಮೈತ್ರಿ 77-98 ಸ್ಥಾನಗಳನ್ನು ಪಡೆಯುವ ಮೂಲಕ ಈ ಸಲವು ಅಧಿಕಾರದಿಂದ ದೂರ ಉಳಿಯಲಿದೆ ಎಂದು ಭವಿಷ್ಯ ನುಡಿದಿದೆ.  ಎನ್ ಡಿಎ 135-159 ಸೀಟುಗಳನ್ನು ಗೆಲ್ಲುವ  ಸಾಧ್ಯತೆ ಇದೆ ಎಂದು  ಎಬಿಪಿ-ಸಿವೋಟರ್ ಅಂದಾಜಿಸಿದೆ. 

ಎನ್ ಡಿಎಗೆ ಶೇ 43, ಮಹಾಮೈತ್ರಿಕೂಟಕ್ಕೆ ಶೇ 35, ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ ಶೇ. 4 ರಷ್ಟು, ಇತರರು ಶೇ.18ರಷ್ಟು ಮತಗಳನ್ನು ಗಳಿಸಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.

ಬಿಜೆಪಿ 73 ರಿಂದ 81 ಸ್ಥಾನಗಳನ್ನು ಪಡೆಯುವ ಮೂಲಕ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲಿದೆ. ಜೆಡಿ(ಯು) 59 ರಿಂದ 67 ಸ್ಥಾನಗಳು ಮತ್ತು ವಿಕಾಸ್ ಶೀಲ್ ಇನ್ಸಾನ್ ಪಾರ್ಟಿ (ವಿಐಪಿ) ಮೂರರಿಂದ ಏಳು ಸ್ಥಾನಗಳನ್ನು ಪಡೆಯಲಿದೆ ಎಂದು ಸಮೀಕ್ಷೆ ತಿಳಿಸಿದೆ.

ಆರ್ ಜೆಡಿ 56 ರಿಂದ 64 ಸ್ಥಾನಗಳು, ಕಾಂಗ್ರೆಸ್ 12 ರಿಂದ 20 ಸ್ಥಾನಗಳನ್ನು ಪಡೆಯಲಿದೆ ಎಂದು ಎಬಿಪಿ-ಸಿವೋಟರ್ ಅಭಿಪ್ರಾಯಪಟ್ಟಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು