ಗುರುವಾರ , ಅಕ್ಟೋಬರ್ 28, 2021
18 °C

ಕೋವಿಡ್‌-19: ಅಕ್ಟೋಬರ್‌ನಿಂದ ಮಕ್ಕಳಿಗೂ ಲಸಿಕೆ

ರಾಯಿಟರ್ಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಝೈಡಸ್‌ ಕ್ಯಾಡಿಲಾ ಕಂಪನಿಯು ಅಕ್ಟೋಬರ್‌ನಲ್ಲಿ, 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ನೀಡಬಹುದಾದ ಕೋವಿಡ್‌ ಲಸಿಕೆ ಝೈಕೋವ್‌-ಡಿ ಅನ್ನು ಬಿಡುಗಡೆ ಮಾಡಲಿದೆ. ಮುಂದಿನ ತಿಂಗಳಿನಿಂದ 12 ವರ್ಷ ಮೇಲ್ಪಟ್ಟ ಭಾರತದ ಎಲ್ಲಾ ಮಕ್ಕಳಿಗೆ ಈ ಲಸಿಕೆ ನೀಡಲಾಗುವುದು ಎಂದು ಮೂಲಗಳು ಹೇಳಿವೆ.

ವಂಶವಾಹಿ ಆಧಾರಿತ ವಿಶ್ವದ ಮೊದಲ ಕೋವಿಡ್‌ ಲಸಿಕೆಯಾಗಿರುವ ಝೈಕೋವ್‌-ಡಿಯನ್ನು ತುರ್ತು ಸಂದರ್ಭದಲ್ಲಿ ಬಳಸಲು ಸರ್ಕಾರದ ಅನುಮತಿ ದೊರೆತಿದೆ. ಕಂಪನಿಯು ಅಕ್ಟೋಬರ್‌ನಿಂದ ಪ್ರತಿ ತಿಂಗಳೂ 1 ಕೋಟಿ ಡೋಸ್‌ ತಯಾರಿಸಲು ಯೋಜನೆ ಹಾಕಿಕೊಂಡಿದೆ ಎಂದು ಮೂಲಗಳು ಹೇಳಿವೆ.

ಈ ಬಗ್ಗೆ ಮಾಹಿತಿಗಾಗಿ ಕೇಂದ್ರ ಆರೋಗ್ಯ ಸಚಿವಾಲಯವನ್ನು ಸಂಪರ್ಕಿಸಲಾಯಿತು. ಆದರೆ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು