ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2020ರಲ್ಲಿ ಸಂಭವಿಸಿದ ಹೆದ್ದಾರಿ ಅಪಘಾತಗಳಲ್ಲಿ 48 ಸಾವಿರ ಮಂದಿ ಸಾವು: ಗಡ್ಕರಿ

Last Updated 9 ಡಿಸೆಂಬರ್ 2021, 11:31 IST
ಅಕ್ಷರ ಗಾತ್ರ

ನವದೆಹಲಿ: 2020ರಲ್ಲಿ ಎಕ್ಸ್‌ಪ್ರೆಸ್‌ ರಸ್ತೆಗಳು ಸೇರಿದಂತೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಭವಿಸಿದ ಅಪಘಾತಗಳಲ್ಲಿ ಒಟ್ಟು 47,984 ಜನ ಸಾವನ್ನಪ್ಪಿದ್ದಾರೆ ಎಂದು ರಸ್ತೆ ಸಾರಿಗೆ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಗುರುವಾರ ಸಂಸತ್ತಿಗೆ ಮಾಹಿತಿ ನೀಡಿದರು.

ಲೋಕಸಭೆಗೆ ನೀಡಿದ ಲಿಖಿತ ಉತ್ತರವೊಂದರಲ್ಲಿ ಅವರು ಈ ಮಾಹಿತಿ ನೀಡಿದರು. 2019ರಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ 53,872 ಮಂದಿ ಅಸುನೀಗಿದ್ದಾರೆ ಎಂದೂ ಹೇಳಿದರು.

ವಾಹನಗಳ ವಿನ್ಯಾಸ, ಸ್ಥಿತಿ, ರಸ್ತೆಗಳ ಪರಿಸ್ಥಿತಿ, ಅತಿವೇಗ, ಕುಡಿದು, ಮಾದಕ ದ್ರವ್ಯ ಸೇವಿಸಿ ಚಾಲನೆ, ಮೊಬೈಲ್‌ ಬಳಕೆ ಮೊದಲಾದವು ಅಪಘಾತಕ್ಕೆ ಪ್ರಮುಖ ಕಾರಣಗಳಾಗಿವೆ ಎಂದು ಗಡ್ಕರಿ ಹೇಳಿದರು.

ರಸ್ತೆ ಸುರಕ್ಷತೆಗೆ ಎಲ್ಲಾ ಹಂತಗಳಲ್ಲಿ ತಜ್ಞರ ಸಹಾಯದಿಂದ ಸಚಿವಾಲಯ ಮಾರ್ಗಸೂಚಿಗಳನ್ನು ನೀಡಿದೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT