ಭಾನುವಾರ, ಏಪ್ರಿಲ್ 2, 2023
23 °C

ಬುಡಕಟ್ಟು ಜನರ ಕೊಡುಗೆ ಪ್ರಚುರಪಡಿಸಬೇಕು: ಹೊಸಬಾಳೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಭೋಪಾಲ್: ವಿವಿಧ ಕ್ಷೇತ್ರಗಳಿಗೆ ಬುಡಕಟ್ಟು ಸಮುದಾಯಗಳು ನೀಡಿರುವ ಅಸಾಧಾರಣ ಕೊಡುಗೆಗಳನ್ನು ದೇಶಕ್ಕೆ ತಿಳಿಸುವ ಅಗತ್ಯ ಇದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಭಾನುವಾರ ಹೇಳಿದರು.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ಬುಡಕಟ್ಟು ಸಮುದಾಯಕ್ಕೆ ಸೇರಿದ ಸ್ವಾತಂತ್ರ್ಯ ಹೋರಾಟಗಾರರನ್ನು ಕೊನೆಗೂ ಗುರುತಿಸಲಾಗಿದೆ. ಅವರಿಗೆ ಸಲ್ಲಬೇಕಾಗಿದ್ದ ಗೌರವವನ್ನು ತಡವಾಗಿಯಾದರೂ ನೀಡಲಾಗಿದೆ’ ಎಂದರು.

‘ವ್ಯಾಪಾರ, ಶಿಕ್ಷಣ, ಆರೋಗ್ಯ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಬುಡಕಟ್ಟು ಜನರ ಕೊಡುಗೆ ಅಮೂಲ್ಯವಾದದ್ದು. ಅವುಗಳನ್ನು ಶಿಕ್ಷಣ ವ್ಯವಸ್ಥೆಯಲ್ಲಿ ಅಳವಡಿಸದೇ ಇರುವುದು ದುರದೃಷ್ಟಕರ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು