ಸೋಮವಾರ, ಏಪ್ರಿಲ್ 19, 2021
32 °C

ಕೋವಿಡ್–19 ಲಸಿಕೆ ನೀಡಿಕೆ ವೇಗ ಹೆಚ್ಚಿಸಬೇಕಿದೆ: ರಾಜ್ಯಗಳಿಗೆ ಕೇಂದ್ರದಿಂದ ಪತ್ರ

ಪಿಟಿಐ Updated:

ಅಕ್ಷರ ಗಾತ್ರ : | |

Covid-19 vaccination

ನವದೆಹಲಿ: ಕೋವಿಡ್–19 ಲಸಿಕೆ ನೀಡಿಕೆ ವೇಗವನ್ನು ಗಣನೀಯವಾಗಿ ಹೆಚ್ಚಿಸುವ ಅಗತ್ಯವಿದೆ ಎಂದು ಕೇಂದ್ರಾಡಳಿತ ಪ್ರದೇಶಗಳು ಹಾಗೂ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಪತ್ರ ಬರೆದಿದೆ. ಹೆಚ್ಚಿನ ಸಂಖ್ಯೆಯ ಆರೋಗ್ಯ ಕಾರ್ಯಕರ್ತರು ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ಇನ್ನೂ ಲಸಿಕೆ ದೊರೆತಿಲ್ಲ ಎಂಬುದನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಕೆಲವು ರಾಜ್ಯಗಳಲ್ಲಿ ಕೋವಿಡ್–19 ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಬೆನ್ನಲ್ಲೇ ಪತ್ರ ಬರೆಯಲಾಗಿದೆ.

ಓದಿ: 

ವಾರವೊಂದರಲ್ಲಿ ಲಸಿಕೆ ನೀಡುವ ದಿನಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ವಾರದಲ್ಲಿ ಕನಿಷ್ಠ ನಾಲ್ಕು ದಿನ ಲಸಿಕೆ ನೀಡಬೇಕು. ಲಸಿಕೆ ನೀಡಿಕೆ ಪ್ರಕ್ರಿಯೆಯ ವೇಗ ಇನ್ನಷ್ಟು ಹೆಚ್ಚಿಸಲು ಹಾಗೂ ದೇಶದ ಅರ್ಧಕ್ಕಿಂತಲೂ ಹೆಚ್ಚು ಜನರಿಗೆ ಲಸಿಕೆ ನೀಡಲು ವ್ಯವಸ್ಥೆಯನ್ನು ಸಜ್ಜುಗೊಳಿಸಬೇಕು ಎಂದು ಎಲ್ಲ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.

ಕೆಲವು ರಾಜ್ಯಗಳು ವಾರದಲ್ಲಿ ಎರಡು ದಿನ ಲಸಿಕೆ ನೀಡುತ್ತಿದ್ದರೆ ಇನ್ನು ಕೆಲವು ನಾಲ್ಕು ಹಾಗೂ ಅದಕ್ಕಿಂತ ಹೆಚ್ಚಿನ ದಿನ ಲಸಿಕೆ ನೀಡುತ್ತಿವೆ. ಸೇವೆಯ ವಿಸ್ತರಣೆಗೆ ಪೂರಕವಾಗಿ ಕೊ–ವಿನ್ ಸಾಫ್ಟ್‌ವೇರ್‌ನಲ್ಲಿ ಹಲವು ಅಂಶಗಳನ್ನು ಸೇರಿಸಲಾಗಿದೆ ಎಂದೂ ಭೂಷಣ್ ಹೇಳಿದ್ದಾರೆ.

ಓದಿ: ನಾಲ್ಕು ರಾಜ್ಯಗಳಲ್ಲಿ ಕೊರೊನಾ ಸೋಂಕು ಮತ್ತೆ ಏರಿಕೆ: ದೇಶದಲ್ಲಿ ಎರಡನೇ ಅಲೆ ಆತಂಕ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು