ಗುರುವಾರ , ಸೆಪ್ಟೆಂಬರ್ 16, 2021
29 °C

ರೈತರು ನಮ್ಮ ಬಂಧು ಬಾಂಧವರು, ಅವರ ನೋವನ್ನು ಅರ್ಥಮಾಡಿಕೊಳ್ಳಬೇಕು: ವರುಣ್‌ ಗಾಂಧಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳ ವಿರುದ್ಧ ಹೋರಾಡುತ್ತಿರುವ ರೈತರನ್ನು ನಮ್ಮ ಬಂಧು ಬಾಂಧವರು ಎಂದು ಕರೆದಿರುವ ಬಿಜೆಪಿ ಸಂಸದ ವರುಣ್‌ ಗಾಂಧಿ,‘ ಸರ್ಕಾರ ರೈತರೊಂದಿಗೆ ಮಾತುಕತೆ ‍ಪುನರಾರಂಭಿಸಬೇಕು ಮತ್ತು ಅವರೊಂದಿಗೆ ಒಮ್ಮತ ಅಭಿ‍ಪ್ರಾಯಕ್ಕೆ ತಲುಪಬೇಕು’ ಎಂದು ಮನವಿ ಮಾಡಿದರು.

ಉತ್ತರ ಪ್ರದೇಶದ ಮುಜಾಫರ್‌ನಗರದ ಸರ್ಕಾರಿ ಕಾಲೇಜು ಮೈದಾನದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾವು(ಎಸ್‌ಕೆಎಂ) ಮಹಾಪಂಚಾಯತ್‌ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಭಾರಿ ಸಂಖ್ಯೆಯಲ್ಲಿ ರೈತರು ಭಾಗಿಯಾಗಿದ್ದಾರೆ.

‘ಮುಜಾಫರ್‌ನಗರದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ನಮ್ಮ ಬಂಧು ಬಾಂಧವರು. ನಾವು ಅವರ ನೋವನ್ನು ಅರ್ಥ ಮಾಡಿಕೊಳ್ಳಬೇಕು. ಅವರ ದೃಷ್ಟಿಕೋನಗಳನ್ನು ಅರ್ಥೈಸಿಕೊಂಡು ಒಮ್ಮತ ಅಭಿಪ್ರಾಯಕ್ಕೆ ತಲುಪಬೇಕು’ ಎಂದು ವರುಣ್‌ ಗಾಂಧಿ ಟ್ವೀಟ್‌ ಮಾಡಿದ್ದಾರೆ. ಇದರೊಂದಿಗೆ ರೈತರ ಪ್ರತಿಭಟನೆಯ ವಿಡಿಯೊವನ್ನು ಹಂಚಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು