ನವದೆಹಲಿ: ವೈದ್ಯಕೀಯ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ಇರುವ ನೀಟ್ ಹಾಗೂ ಎಂಜಿನಿಯರಿಂಗ್ ಕಾಲೇಜುಗಳ ಪ್ರವೇಶಕ್ಕೆ ಇರುವ ಜೆಇಇಯನ್ನು ನಿಗದಿತ ದಿನಾಂಕದಂದೇ ನಡೆಸಲು ಸಜ್ಜಾಗಿರುವರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ), ಕೋವಿಡ್–19 ಕಾರಣದಿಂದ ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಳ ಮಾಡಿದೆ.

ಮಂಗಳವಾರ ಈ ಕುರಿತು ಪ್ರಕಟಣೆ ಹೊರಡಿಸಿರುವ ಎನ್ಟಿಎ, ‘ಜೆಇಇ–ಮೇನ್ನ ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು 570ರಿಂದ 660ಕ್ಕೆ ಹೆಚ್ಚಿಸಲಾಗಿದೆ. ನೀಟ್ ಕೇಂದ್ರಗಳನ್ನು 2,546ರಿಂದ 3,843ಕ್ಕೆ ಹೆಚ್ಚಿಸಲಾಗಿದೆ. ಪರಸ್ಪರ ಅಂತರ ಕಾಯ್ದುಕೊಳ್ಳುವ ಉದ್ದೇಶದಿಂದ ನೀಟ್ ವೇಳೆ, ಪ್ರತಿ ಕೊಠಡಿಯಲ್ಲಿ 24 ವಿದ್ಯಾರ್ಥಿಗಳ ಬದಲಾಗಿ ಕೇವಲ 12 ವಿದ್ಯಾರ್ಥಿಗಳಷ್ಟೇ ಇರಲಿದ್ದಾರೆ’ ಎಂದು ತಿಳಿಸಿದೆ.

ಸೆಪ್ಟೆಂಬರ್ 13ರಂದು ನೀಟ್ ಹಾಗೂ ಸೆ.1 ರಿಂದ 6ರವರೆಗೆ ಜೆಇಇ ಪರೀಕ್ಷೆಗಳು ನಡೆಯಲಿವೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟ್ಯಾಲಿನ್ ಸೇರಿದಂತೆ ಹಲವರು ಪರೀಕ್ಷೆಯನ್ನು ಮುಂದೂಡುವಂತೆ ಕೋರಿದ್ದಾರೆ. ಈ ಪರೀಕ್ಷೆಗಳನ್ನು ಮುಂದೂಡಲು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಪರೀಕ್ಷೆ ಮುಂದೂಡಲು ಸಾಧ್ಯವಿಲ್ಲ ಎಂದು ಆಗಸ್ಟ್ 17ರಂದು ತೀರ್ಪು ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.